ಬೀದರ್: ‘ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿ, ರೈತರ ಪ್ರತಿ ಹೆಕ್ಟೇರ್ ಜಮೀನಿಗೆ ₹50 ಸಾವಿರ ಪರಿಹಾರ ಕೊಡಬೇಕು’ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಭಾಲ್ಕಿ, ಹುಲಸೂರ ಮತ್ತು ಆಳಂದ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದರೆ ಆಗದು. ಬೇರೆ ತಾಲ್ಲೂಕುಗಳಲ್ಲಿಯೂ ಮಳೆ ಆಗಿಲ್ಲ. ಔರಾದ್, ಚಿಂಚೋಳಿ ತಾಲ್ಲೂಕುಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಬಿತ್ತನೆಯಾಗಿದೆ. ಅದಕ್ಕಾಗಿ ರೈತರು ಹಣ ಖರ್ಚು ಮಾಡಿದ್ದಾರೆ. ರೈತರ ಬಳಿ ಸದ್ಯ ಹಣವಿಲ್ಲ. ಪಿ.ಎಂ.ಕಿಸಾನ್ ನಿಧಿಯಡಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ ₹4000 ಪ್ರೋತ್ಸಾಹ ಧನ ಕೂಡ ಬಂದ್ ಮಾಡಲಾಗಿದೆ. ರೈತರಿಗೆ ಗಾಯದ ಮೇಲೆ ಬರೆ ಎಳದಂತಾಗಿದೆ. ಕೂಡಲೇ ಆ ಹಣ ರೈತರ ಖಾತೆಗೆ ಜಮೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.