ಬೀದರ್: ಕೊಲೆಗೀಡಾದ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಯುವ ಮೋರ್ಚಾದ ಬೀದರ್ ಜಿಲ್ಲಾ ಘಟಕ ನೆರವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದ ಪ್ರವೀಣ್ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಅವರು ₹ 2,25,600 ಚೆಕ್ ವಿತರಿಸಿದರು.

ಯುವ ಮೋರ್ಚಾ ರಾಜ್ಯ ಘಟಕದ ಕರೆಯ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹಿಸಿ, ಪ್ರವೀಣ್ ಕುಟುಂಬಕ್ಕೆ ಆರ್ಥಿಕ ಸಹಾಯ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಇಡೀ ರಾಜ್ಯದಲ್ಲೇ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ದೇಣಿಗೆ ಸಂಗ್ರಹಿಸಲಾಗಿದೆ. ಬಿಜೆಪಿ ಒಂದು ಕುಟುಂಬ ಇದ್ದಂತೆ. ಪಕ್ಷ ಸದಾ ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದೆಗುಂದಬಾರದು ಎಂದು ಹೇಳಿದರು.

ಯುವ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಕೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಸ್ವಾಮಿ, ಜನಾರ್ಧನ್ ರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.