ಬೀದರ್: ಬೀದರ್ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಕುಡಂಬಲ್ ಚುನಾವಣಾ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.

‘ನಿರ್ಣಾ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿಯಾಗಿದ್ದ ಆನಂದ ಅವರು ಚುನಾವಣಾ ಕರ್ತವ್ಯಕ್ಕಾಗಿ ಕುಡಂಬಲ್ ಚೆಕ್ಪೋಸ್ಟ್ನಲ್ಲಿ ನಿಯೋಜನೆಗೊಂಡಿದ್ದರು. ಬೆಳಿಗ್ಗೆ 8ರಿಂದ ಮಧ್ಯಾಹ್ನ 3ರ ಪಾಳಿ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ತೀವ್ರ ತೆರನಾದ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಧ್ಯಾಹ್ನ 1ಕ್ಕೆ ಕೊನೆಯುಸಿರೆಳೆದಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.