ಬೀದರ್: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ ಪ್ರಯುಕ್ತ ಬಹಮನಿ ಸುಲ್ತಾನರ ಕಾಲದ ಕೋಟೆಯನ್ನು ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ಭಾರತದ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವ ಸವಿನೆನಪಿನಲ್ಲಿ ದೇಶದ 100 ಆಯ್ದ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ, ಅಕ್ಟೋಬರ್ 17ರ ವರೆಗೆ ದೀಪಾಲಂಕಾರ ಮುಂದುವರಿಯಲಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಕಿರಣ್ ಬಾಬು ತಿಳಿಸಿದ್ದಾರೆ.

ಸಾಮಾನ್ಯವಾಗಿ ಎಎಸ್ಐ ಅಧೀನದ ಸ್ಮಾರಕಗಳ ವೀಕ್ಷಣೆಗೆ ಸಂಜೆ 6 ಗಂಟೆ ವರೆಗೆ ಮಾತ್ರ ಅವಕಾಶ ಇರುತ್ತದೆ. ಆದರೆ, ಭಾನುವಾರ ಮಧ್ಯರಾತ್ರಿ ವರೆಗೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಸ್ಮಾರಕಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ವಾರಾಂತ್ಯಕ್ಕೆ ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿನ ಸ್ಮಾರಕಗಳ ವೀಕ್ಷಣೆಗೆ ಭೇಟಿ ಕೊಡುತ್ತಾರೆ. ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಸ್ಮಾರಕಗಳನ್ನು ಕಣ್ತುಂಬಿಕೊಳ್ಖುವ ಅವಕಾಶ ದೊರೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.