ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು (26) ಸಂಸತ್ತು ಪ್ರವೇಶಿಸಲಿರುವ ಅತಿ ಕಿರಿಯ ವಯಸ್ಸಿನ ಸಂಸದನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

1997ರ ಡಿಸೆಂಬರ್ 29ರಂದು ಜನಿಸಿರುವ ಸಾಗರ್ ಖಂಡ್ರೆಯವರು ಎದುರಿಸಿದ ಮೊದಲ ಚುನಾವಣೆಯಲ್ಲೇ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಮಣಿಸಿ ಸಂಸತ್ತು ಪ್ರವೇಶಿಸಿರುವುದು ವಿಶೇಷ. 1984ರಲ್ಲಿ ಬೀದರ್ ಲೋಕಸಭಾ ಕ್ಷೇತ್ರದಿಂದಲೇ ನರಸಿಂಗ್‌ರಾವ್ ಸೂರ್ಯವಂಶಿ ಅವರು ತನ್ನ 27ನೇ ವಯಸ್ಸಿನಲ್ಲಿ ಗೆದ್ದು ಸಂಸತ್ ಪ್ರವೇಶಿಸಿದ್ದರು. ಈಗ ಆ ದಾಖಲೆಯನ್ನು ಸಾಗರ್ ಅಳಿಸಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.