ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಬೀದರ್ ಗ್ರಾಮೀಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಬೃಹತ್ ತಿರಂಗಾ ಪಾದಯಾತ್ರೆ ನಡೆಯಿತು.

ಶ್ರೀ ಸಾಯಿ ಆದರ್ಶ ಶಾಲೆ ಆವರಣದಲ್ಲಿ ಶಾಸಕ ರಹೀಂಖಾನ್ ಸಸಿಗೆ ನೀರೆರೆಯುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಅಲ್ಲಿಂದ ಪ್ರಾರಂಭಗೊಂಡ ಪಾದಯಾತ್ರೆಯು ಜನರಲ್ ಕಾರ್ಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಭಗತ್‍ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಗಾಂಧಿಗಂಜ್, ಚಿದ್ರಿ ಮಾರ್ಗವಾಗಿ ಶಾಸಕರ ಗೃಹ ಕಚೇರಿಗೆ ತಲುಪಿ ಸಮಾರೋಪಗೊಂಡಿತು.

ಕಾರ್ಯಕರ್ತರು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡಿದ್ದರು. ಭಾರತ ಮಾತೆಗೆ ಜೈಕಾರದ ಘೋಷಣೆಗಳನ್ನು ಕೂಗಿದರು. ಪಾದಯಾತ್ರೆಯ ಮಾರ್ಗದಲ್ಲಿನ ಮಹಾ ಪುರುಷರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಗೌರವಿಸಿದರು. ಡೊಳ್ಳು ಕುಣಿತ, ಹಲಿಗೆ, ಬ್ಯಾಂಡ್ ಪಾದಯಾತ್ರೆಯ ಮೆರುಗು ಹೆಚ್ಚಿಸಿದವು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿತಿ, ಕಾರ್ಯದರ್ಶಿ ಪರ್ವೇಜ್ ಕಮಲ್, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಮುಖಂಡರಾದ ಬಸವರಾಜ ಬುಳ್ಳಾ, ಮುರಳಿಧರ ಎಕಲಾರಕರ್, ಅಜಮತ್ ಪಟೇಲ್, ಬೀದರ್ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ಯುಸೂಫ್, ಸಂಜಯ್ ಜಾಗೀರದಾರ್, ದಶರಥ ದೊಡ್ಡಿ, ಸಂಜುಕುಮಾರ ಡಿ.ಕೆ, ಗೋವರ್ಧನ್ ರಾಠೋಡ್, ಶರಣಪ್ಪ ಶರ್ಮಾ, ನಾರಾಯಣರಾವ್ ಭಂಗಿ, ಸಚಿನ್ ಮಲ್ಕಾಪುರೆ, ಫರೀದ್ ಖಾನ್, ಪ್ರಶಾಂತ ದೊಡ್ಡಿ, ಧನರಾಜ ಹಂಗರಗಿ, ಮೋಹನ್ ಕಾಳೇಕರ್, ಮಹಮ್ಮದ್ ರಿಯಾಜ್, ಮಹಮ್ಮದ್ ಗೌಸ್, ಶೌಕತ್ ಅಲಿ, ಹಣಮಂತ ಮಲ್ಕಾಪುರೆ, ಸುನೀಲ್ ಬಚ್ಚನ್, ಮಹಮ್ಮದ್ ಮಿಸ್ಬಾ ಮೊದಲಾದವರು ಪಾಲ್ಗೊಂಡಿದ್ದರು.

ಬೀದರ್ ವಿಧಾನಸಭಾ ಕ್ಷೇತ್ರದ ವಿವಿಧೆಡೆಯಿಂದ ವಾಹನಗಳಲ್ಲಿ ಕಾರ್ಯಕರ್ತರು ನಗರಕ್ಕೆ ಬಂದಿದ್ದರು. ಕಾರ್ಯಕರ್ತರಿಗೆ ಶಾಸಕರ ಗೃಹ ಕಚೇರಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.