ಔರಾದ್/ಬೀದರ್: ‘ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಠಾವೋ, ಬೀದರ್ ಬಚಾವೋ ಮಾಡುವುದು ಅನಿವಾರ್ಯವಾಗಿದೆ. ಖೂಬಾ ಬದಲು ಸಾಮಾನ್ಯ ಕಾರ್ಯಕರ್ತನಿಗೆ ಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡುತ್ತೇನೆ’ ಎಂದು ಔರಾದ್ ಬಿಜೆಪಿ ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವ ಭಗವಂತ ಖೂಬಾ ಅವರ ಬಗ್ಗೆ ಕ್ಷೇತ್ರದಲ್ಲಿ ಸಾಕಷ್ಟು ವಿರೋಧ ಇದೆ. ಅವರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಔರಾದ್, ಬಸವಕಲ್ಯಾಣ, ಆಳಂದ ಕ್ಷೇತ್ರದಲ್ಲೂ ಅವರ ಬಗ್ಗೆ ತೀವ್ರ ಅಸಮಾಧಾನ ಇದೆ. ಅವರ ಕುಟುಂಬ ಮೂಲತಃ ಕಾಂಗ್ರೆಸ್‍ನದ್ದು. ಅವರ ಸಹೋದರ ಗಣಪತರಾವ ಖೂಬಾ ಅವರು ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದವರು. ಹೀಗಾಗಿ ಅವರ ಮನಃಸ್ಥಿತಿ ಪೂರ್ಣ ಕಾಂಗ್ರೆಸ್‍ನದ್ದು. ಅವರು ತಮ್ಮ ಅನುದಾನದಲ್ಲಿ ಅನೇಕ ಕೆಲಸಗಳನ್ನು ಕಾಂಗ್ರೆಸ್‍ನವರಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.