ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆ ಶಿಕ್ಷಕನ ಮೇಲೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಮದುವೆಯಾದ ಪ್ರಕರಣ ಮೆಹಕರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಶಿಕ್ಷಕನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ.

ಶಿಕ್ಷಕನ ಕರ್ತವ್ಯಲೋಪ, ದುರ್ನಡತೆಯಿಂದ ಶಿಕ್ಷಣ ಇಲಾಖೆ ಮುಜುಗರಕ್ಕೆ ಒಳಗಾಗಿದೆ. ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಾವಳಿ 1957ರ ನಿಯಮಗಳನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅದೇ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.