ಬೀದರ್: ‘ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಫಲಿತಾಂಶವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಗೆಲುವು’ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವ್ಯಾಖ್ಯಾನಿಸಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಮೂರನೇ ಸಲ ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪಕ್ಕೆ ಸಂದ ಗೆಲುವು ಇದು. ಹರಿಯಾಣದಲ್ಲಿ ಕಾಂಗ್ರೆಸ್ ಷಡ್ಯಂತ್ರ ಮಾಡಿತ್ತು. ಕಳೆದ ಕೆಲವು ವರ್ಷಗಳಿಂದ ನಕಲಿ ರೈತ ನಾಯಕರುಗಳ ಗುಂಪು ರಚಿಸಿ, ಅಮಾಯಕರನ್ನು ದಾರಿ ತಪ್ಪಿಸಿ ಕೇಂದ್ರ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿತ್ತು. ಪ್ರತಿಭಟನೆ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಕೆಲಸವಾಗಿತ್ತು. ಆದರೆ, ಪ್ರಜ್ಞಾವಂತ ಮತದಾರರು ಮೋದಿ ಅವರಿಗೆ ಬಲ ತುಂಬಿದ್ದಾರೆ. ಇದರಿಂದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಿಗೆ ಮುಖಭಂಗವಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.