ಬೀದರ್: ‘ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಲಿ ಸಹಾಯಕ ನಿರ್ದೇಶಕ ಡಾ. ಗೌತಮ್ ಅರಳಿ ಹಾಗೂ ಸೂಪರಿಟೆಂಡೆಂಟ್ ಪದ್ಮಾವತಿ ಅವರು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು ಅವರ ವಿರುದ್ಧ ತನಿಖೆ ಕೈಗೊಳ್ಳಬೇಕು’ ಎಂದು ದ್ರಾವಿಡ್ ಕ್ರಾಂತಿ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಗೌತಮ್ ಪ್ರಸಾದ ಆಗ್ರಹಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪದ್ಮಾವತಿ ಅವರು ಒಳಾಂಗಣ ಕ್ರೀಡಾಂಗಣದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸದೆ ಅದರ ಬೋಗಸ್ ಬಿಲ್ ಸೃಷ್ಟಿಸಿ ಭ್ರಷ್ಟಾಚಾರ ಮಾಡಿದ್ದಾರೆ. ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣದ ಪೇಂಟಿಂಗ್ ಮಾಡಿಸಿ ಅದರ ಹೆಸರಿನಲ್ಲಿ ಕೂಡ ಭ್ರಷ್ಟಾಚಾರವೆಸಗಿದ್ದಾರೆ. ಈಜುಕೊಳ ಮತ್ತು ಬಾತ್ ರೂಮ್ಗಳು ಶಿಥಿಲಾವಸ್ಥೆಯಲ್ಲಿದ್ದು ಇದನ್ನು ದುರಸ್ತಿಗೊಳಿಸದೆ ಬೋಗಸ್ ಬಿಲ್ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದರು.

‘ಸ್ವಾಮಿ ವಿವೇಕಾನಂದ ಜಯಂತಿ ಹೆಸರಿನಲ್ಲಿ ಒಂದು ದಿನದ ಕಾರ್ಯಕ್ರಮ ಮಾಡಿ ಒಂದು ವಾರದ ಯುವ ಸಪ್ತಾಹದ ಹಣ ಲೂಟಿ ಮಾಡಿರುತ್ತಾರೆ. ಈಜುಕೊಳದ ನಿರ್ವಹಣೆಯ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೇ ಮಾಡದೆ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಸೇರಿಕೊಂಡು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಆರೋಪ ಮಾಡಿದರು.

‘ಗೌತಮ್ ಅರಳಿ ಅವರು ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯ ನೋಡಲ್ ಅಧಿಕಾರಿಯಾಗಿ ಸಾರ್ವಜನಿಕರಿಗೆ ಮತ್ತು ಯುವ ಮತದಾರರಿಗೆ ಚುನಾವಣಾ ಅರಿವು ಮೂಡಿಸುವ ಕಾರ್ಯಕ್ರಮದ ವೆಚ್ಚದಲ್ಲಿ ಅವ್ಯವಹಾರ ಎಸಗಿದ್ದಾರೆ. ಕಾರ್ಯಕ್ರಮ ಮಾಡಲು ಕಿರಿಯ ಅಧಿಕಾರಿಗಳಿಗೆ ಯಾವುದೇ ಖರ್ಚು ಕೊಡದೆ ಅಂದಾಜು ₹10 ಲಕ್ಷಕ್ಕೂ ಅಧಿಕ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಬೇರೆ ಯಾವುದೋ ಕಾರ್ಯಕ್ರಮದಲ್ಲಿ ಬ್ಯಾನರ್ಗಳು ಹಾಕಿಕೊಂಡು ಭಾವಚಿತ್ರ ತೆಗೆದು ಕಾರ್ಯಕ್ರಮ ಮಾಡಿದ್ದೇವೆ ಎಂದು ಸುಳ್ಳು ಹೇಳಿ ಹಣ ಲೂಟಿ ಮಾಡಿರುತ್ತಾರೆ’ ಎಂದು ಗಂಭೀರವಾಗಿ ಆರೋಪಿಸಿದರು.

‘ಅರಳಿ ಅವರು ಕಳೆದ 20 ವರ್ಷಗಳಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ, ಜಿಲ್ಲಾ ಪಂಚಾಯಿತಿಯ ನೋಡಲ್ ಅಧಿಕಾರಿಯಾಗಿ, ಸ್ವಚ್ಛ ಭಾರತ್ ಮಿಷನ್ ಅಧಿಕಾರಿಯಾಗಿ ಜೊತೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ನಾಲ್ಕು ಇಲಾಖೆಗಳ ಪ್ರಭಾರ ವಹಿಸಿಕೊಂಡು ನಾಲ್ಕೂ ಇಲಾಖೆಯಲ್ಲೂ ವ್ಯಾಪಕ ಭ್ರಷ್ಟಾಚಾರ ಮಾಡಿರುತ್ತಾರೆ. 2021ನೇ ಇಸ್ವಿಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಅರಳಿ ಅವರನ್ನು ಮೂಲ ಸ್ಥಾನ ಪಶು ವೈದ್ಯಕೀಯ ಇಲಾಖೆಗೆ ಕಳುಹಿಸಿದ್ದರು. ನಂತರದ ಉಸ್ತುವಾರಿ ಸಚಿವರು ಮತ್ತೆ ಅರಳಿಯವರನ್ನು ಅದೇ ಜಾಗಕ್ಕೆ ವರ್ಗಾವಣೆ ಮಾಡಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ’ ಎಂದು ಆರೋಪಿಸಿದರು.

‘ಗೌತಮ್ ಅರಳಿ ಅವರ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರ ರಾಜಕೀಯ ಪ್ರಭಾವ ಬಳಿಸಿ ಎಲ್ಲ ಕಡೆ ಭ್ರಷ್ಟಾಚಾರ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ಪ್ರಜಾ ಶಕ್ತಿ ಸಮಿತಿ ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ದ್ರಾವಿಡ್ ಕ್ರಾಂತಿ ಯುವ ಸೇನೆ ಕಾರ್ಯದರ್ಶಿ ಕಲ್ಯಾಣರಾವ್ ಗೂನ್ನಳ್ಳಿಕರ್, ಖಜಾಂಚಿ ಜೈ ಭೀಮ್ ಕ್ಯಾದೆ, ಉಪಾಧ್ಯಕ್ಷ ಸಂಜುಕುಮಾರ ಲಕ್ಷ್ಮಿದೊಡ್ಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.