ಬೀದರ್: ಇಲ್ಲಿನ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್) ಪ್ರಭಾರ ನಿರ್ದೇಶಕಿಯಾಗಿ ಡಾ. ಶಾಂತಲಾ ಕೌಜಲಗಿ ಅವರನ್ನು ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಶಾಂತಲಾ ಅವರು ಸದ್ಯ ಬ್ರಿಮ್ಸ್ನಲ್ಲಿ ಮಕ್ಕಳ ವಿಭಾಗದ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂದಿನ ಆದೇಶದ ವರೆಗೆ ನಿರ್ದೇಶಕರ ಪ್ರಭಾರ ವಹಿಸಿಕೊಂಡು ಕೆಲಸ ನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಿದೆ.

ಬ್ರಿಮ್ಸ್ ನಿರ್ದೇಶಕರಾಗಿದ್ದ ಡಾ. ಶಿವಕುಮಾರ ಶೆಟಕಾರ್ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದ ಕಾರಣಕ್ಕಾಗಿ ಜನರ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಚರ್ಮರೋಗ ವಿಭಾಗದ ಮುಖ್ಯಸ್ಥರ ಹುದ್ದೆಯಲ್ಲಿ ಮುಂದುವರಿಸಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.