ಬೀದರ್: ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಚಾಲಕ ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಸಮೀಪದ ಸಾರಿಗೆ ಘಟಕದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೊಂಗರಗಿ ಗ್ರಾಮದ ಓಂಕಾರ ಬಸಪ್ಪ ಮ್ಯಾಕ್ರೆ(40) ಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ. ಭಾಲ್ಕಿ ತಾಲ್ಲೂಕಿನ ಕೋಸಂ ಗ್ರಾಮ ಪಂಚಾಯಿತಿ ಮತಗಟ್ಟೆಗೆ ಚುನಾವಣಾ ಸಿಬ್ಬಂದಿಯನ್ನು ಒಯ್ಯಲು ಅವರನ್ನು ನಿಯೋಜಿಸಲಾಗಿತ್ತು.

ಶನಿವಾರ ರಾತ್ರಿ ಚುನಾವಣಾ ಸಿಬ್ಬಂದಿ ಮತ್ತು ಇವಿಎಂ ಯಂತ್ರಗಳನ್ನು ಸಾಗಿಸಿದ್ದ ಓಂಕಾರ ಗ್ರಾಮದಲ್ಲಿ ಬಸ್ ಬಿಟ್ಟು ಬೀದರ್‌ನ ಸಾರಿಗೆ ಘಟಕಕ್ಕೆ ಮಧ್ಯರಾತ್ರಿ ವಾಪಸ್ಸಾಗಿ ವಿಶ್ರಾಂತಿ ಕೋಣೆಗೆ ತೆರಳಿದ್ದರು. ಭಾನುವಾರ
ಬೆಳಿಗ್ಗೆ ಸಾರಿಗೆ ಸಿಬ್ಬಂದಿ ಕೊಠಡಿಗೆ ತೆರಳಿದಾಗ ಅವರು ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನ್ಯೂಟೌನ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.