ಬೀದರ್: ‘ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ ₹3,454 ಕೋಟಿ ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಭಾಲ್ಕಿಯಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ಎಫ್. ನಿಯಮಾವಳಿಗಳ ಪ್ರಕಾರ ₹18,171 ಕೋಟಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯದ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು.

ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ ₹3,454 ಕೋಟಿ ಪರಿಹಾರ ಮಾತ್ರ ಘೋಷಿಸಿದೆ. ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಖಂಡ್ರೆ ಆಗ್ರಹಿಸಿದರು.
.ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ.ಕೇಂದ್ರಕ್ಕೆ ಎಚ್ಚರಿಕೆ ನೀಡಿ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್ಗೆ ಧನ್ಯವಾದ: ಸಿಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.