ಬೀದರ್: ಜಿಲ್ಲೆಯಲ್ಲಿ ಸೋಯಾಬೀನ್ ರಾಶಿ ಮಂದಗತಿಯಲ್ಲಿ ನಡೆದಿದ್ದು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲು ಇರುವ ಅವಧಿಯನ್ನು ವಿಸ್ತರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಈ ಸಂಬಂಧ ಸೇನೆಯ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.

ಜಿಲ್ಲೆಯಾದ್ಯಂತ ಮಳೆ ಆಗುತ್ತಿರುವುದರಿಂದ ಸೋಯಾಬೀನ್ ರಾಶಿ ನಿಧಾನ ಗತಿಯಲ್ಲಿ ನಡೆಯುತ್ತಿದೆ. ಇದುವರೆಗೆ ಸಂಪೂರ್ಣ ರಾಶಿ ಮುಗಿದಿಲ್ಲ. ಖರೀದಿ ಕೇಂದ್ರಗಳಲ್ಲಿ ರೈತರ ಹೆಸರು ನೋಂದಣಿ ಮಾಡುತ್ತಿಲ್ಲ. ಇನ್ನೂ ಒಂದು ತಿಂಗಳು ಅವಧಿ ವಿಸ್ತರಿಸಿದರೆ ಎಲ್ಲ ರೈತರಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಉದ್ದಿನ ರಾಶಿ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಿರಂತರ ಮಳೆ ಆಗಿದ್ದರಿಂದ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಕೊಡಬೇಕು. ಜಿಲ್ಲೆಯ ಕಬ್ಬಿನ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ರೈತ ಸಂಘದ ಪದಾಧಿಕಾರಿಗಳ ಸಭೆ ಕರೆದು, ಚರ್ಚಿಸಿ, ಯೋಗ್ಯ ಬೆಲೆ ಕೊಡಿಸಬೇಕು. ಬಿಎಸ್ಎಸ್ಕೆ ಕಾರ್ಖಾನೆ ಹಾಗೂ ಚಿಂಚೋಳಿಯ ಸಿದ್ದಶ್ರೀ ಕಾರ್ಖಾನೆ ಬಂದ್ ಆಗಿರುವುದರಿಂದ ಜಿಲ್ಲೆಯಲ್ಲಿ ಉಳಿದ ಕಾರ್ಖಾನೆಗೆ ಕಬ್ಬು ನುರಿಸಲು ಸಮಸ್ಯೆ ಆಗುತ್ತಿದೆ. ಜಿಲ್ಲೆಯ ಉಳಿದ ಕಾರ್ಖಾನೆಗಳು ಶೀಘ್ರದಲ್ಲಿ ಕಬ್ಬು ನುರಿಕೆ ಆರಂಭಿಸಲು ಆದೇಶಿಸಬೇಕು ಎಂದು ಆಗ್ರಹಿಸಿದರು.

ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹೆಚ್ಚಿನ ಕಮಿಷನ್ ತೆಗೆದುಕೊಳ್ಳುತ್ತಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಅದಕ್ಕೆ ಕಡಿವಾಣ ಹಾಕಬೇಕು. ಕೆಎಂಎಫ್ನವರು ಪ್ರತಿ ಲೀಟರ್ ಹಾಲಿನ ದರ ₹7 ಕಡಿಮೆ ಮಾಡಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಇದರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಬೆಳೆ ಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಪ್ರಮುಖರಾದ ಶಂಕರೆಪ್ಪ ಪಾರಾ, ಶೇಷರಾವ ಕಣಜಿ, ಚಂದ್ರಶೇಖರ ಜಮಖಂಡಿ, ಸುವರ್ಣಾ ಬಳತೆ, ಮಹಾನಂದಾ ದೇಶಮುಖ, ಶೋಭಾವತಿ ಕಾರಭಾರಿ, ಸುಭಾಷ ರಗಟೆ, ಪ್ರವೀಣ ಕುಲಕರ್ಣಿ, ಬಾಬುರಾವ ಜೋಳದಾಬಕಾ, ರೇವಣಸಿದ್ದಪ್ಪ ಯರಬಾಗ, ನಾಗಯ್ಯ ಸ್ವಾಮಿ, ಪ್ರಕಾಶ ಬಾವಗೆ, ಶಿವಾನಂದ ಹುಡಗೆ, ಮಲ್ಲಿಕಾರ್ಜುನ ಚಕ್ಕಿ, ಸುಮಂತ ಗ್ರಾಮಲೆ, ಉಮಾಕಾಂತ ತೋರಣಾ, ಝರಣಪ್ಪ ದೇಶಮುಖ, ಧೂಳಪ್ಪಾ ಸೋರಳ್ಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.