ಬೀದರ್: ಮಾಜಿ ಶಾಸಕ ರಮೇಶಕುಮಾರ ಪಾಂಡೆ (90) ನಗರದಲ್ಲಿ ಬುಧವಾರ ಸಂಜೆ ನಿಧನರಾದರು.

ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಮಗ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಗುರುವಾರ (ಏ.18) ಬೆಳಿಗ್ಗೆ 11ಕ್ಕೆ ನಗರದ ಗುರುದ್ವಾರ ಸಮೀಪದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೀದರ್ ತಾಲ್ಲೂಕಿನ ಜನವಾಡ ನಿವಾಸಿಯಾದ ಪಾಂಡೆ ಅವರು ಆರಂಭದ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. 1990ರಲ್ಲಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿದ್ದರು. 1998ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಪುನಃ 2019ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದರು. ಆರ್‌ಆರ್‌ಕೆ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.