ಬೀದರ್: ‘ಜು.8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ಲೋಕ ಅದಾಲತ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಟ್ಟು 23,340 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹10.36 ಕೋಟಿ ವಸೂಲಾತಿ ಹಾಗೂ ಪರಿಹಾರ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪ ಕಲ್ಯಾಣರಾವ ಕನಕಟ್ಟೆ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 17,521 ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹8.77 ಕೋಟಿ ವಸೂಲಾತಿ ಮಾಡಿ ಪರಿಹಾರ ಒದಗಿಸಲಾಗಿದೆ. ಜಿಲ್ಲೆಯ ಒಟ್ಟು 12,963 ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ 5,819 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹1.58 ಕೋಟಿ ವಸೂಲಿ ಮಾಡಿ ಪರಿಹಾರ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲೆಯ ವಿವಿಧ ಬ್ಯಾಂಕ್‌ಗಳಿಗೆ ಸಂಬಂಧಿಸಿದ 5,454 ಪ್ರಕರಣಗಳ ಪೈಕಿ 111 ಇತ್ಯರ್ಥಗೊಳಿಸಿ, ₹1 ಕೋಟಿ ಬಾಕಿ ವಸೂಲಿ ಮಾಡಲಾಗಿದೆ. ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿಗಳ ನೀರಿನ ತೆರಿಗೆ ಮತ್ತು ಬಿ.ಎಸ್.ಎನ್.ಎಲ್., ಜೆಸ್ಕಾಂ ಬಾಕಿ ಬಿಲ್, ಟ್ರಾಫಿಕ್ ಚಾಲನ್‌ಗೆ ಸಂಬಂಧಿಸಿದ 5,708 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹53.39 ಲಕ್ಷ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ವಿವಾಹ ವಿಚ್ಛೇದನಕ್ಕಾಗಿ ಬಸವಕಲ್ಯಾಣ ಹಾಗೂ ಬೀದರ್‌ನಿಂದ ತಲಾ ಒಂದು ಜೋಡಿ ಅರ್ಜಿ ಸಲ್ಲಿಸಿತ್ತು. ಅದನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿ ಕಳಿಸಲಾಗಿದೆ. ಹಿಂದಿನ ಲೋಕ ಅದಾಲತ್‌ನಲ್ಲಿ 19 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು. ಆದರೆ. ಈ ಸಲ ನಾಲ್ಕು ಸಾವಿರ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.