ಬೀದರ್: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಎಲ್ಲ ಬಸ್ಗಳ ಮೇಲೆ ಕಲ್ಯಾಣ ಕರ್ನಾಟಕ ಎಂದು ಬರೆಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಸಮಿತಿ ಅಧ್ಯಕ್ಷ ಅನಂತರೆಡ್ಡಿ. ಬ.ಟಿ ಮಿರ್ಜಾಪೂರ ನೇತೃತ್ವದಲ್ಲಿ ಪ್ರಮುಖರು ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು.

ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರು ನಾಮಕರಣ ಮಾಡಲಾಗಿದೆ. ಆದರೆ ಫಲಕಗಳಲ್ಲಿ ಇನ್ನೂ ಹಳೆಯ ಹೆಸರುಗಳೇ ಇವೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಎರಡು ವಾರಗಳಲ್ಲಿ ಹೆಸರು ಬದಲಿಸಿದ ಫಲಕ ಹಾಕದಿದ್ದರೆ ಪ್ರತಿಭಟನೆ ಮಾಡುವುದು ಅನಿವಾರ್ವವಾಗಲಿದೆ ಎಂದು ಎಚ್ಚರಿಸಿದರು.

ಡಾ.ಸಿ.ಆನಂದರಾವ್, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.