ಬಸವಕಲ್ಯಾಣ (ಬೀದರ್ ಜಿಲ್ಲೆ):`ಛತ್ರಪತಿ ಶಿವಾಜಿ ಮಹಾರಾಜರ ನಿಜ ಇತಿಹಾಸ ಅರಿಯಬೇಕು. ಅವರ ಅಮೋಘ ಕಾರ್ಯವನ್ನು ಮರೆಮಾಚಿ ಅವರನ್ನು ಬರೀ ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಿರುವುದು ಸರಿಯಲ್ಲ' ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜ ಪ್ರತಿಮೆ ಪ್ರತಿಷ್ಠಾಪನೆ ಮತ್ತು ಪಾರ್ಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

`ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ತೋರಿದ ಮಾರ್ಗದಲ್ಲಿ ನಡೆಯಬೇಕು. ಭೇದಭಾವವಿಲ್ಲದ ಸೌಹಾರ್ದತೆ ಸಾರುವ ಶಿವಾಜಿ ಮಹಾರಾಜರ ಹಿಂದುತ್ವ ನಮ್ಮದಾಗಲಿ. ರಾಜಕೀಯ, ಆರ್ಥಿಕ ಮತ್ತು ಶೈಕ್ಷಣವಾಗಿ ಅಭಿವೃದ್ಧಿ ಹೊಂದಬೇಕು. ಸಮಾಜದಲ್ಲಿ ಒಗ್ಗಟ್ಟು ಇಲ್ಲದ್ದಿದ್ದರೆ ಏನೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮರಾಠಾ ಸಮುದಾಯದ ಶಾಸಕರು, ಸಚಿವರು ಇರುತ್ತಾರೆ. ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ವಿಜಯಸಿಂಗ್ ಮತ್ತು ಡಾ.ಅಜಯಸಿಂಗ್ ಈ ಅಣ್ಣತಮ್ಮಂದಿರು ಶಿವಾಜಿ ಪಾರ್ಕ್ ಅಭಿವೃದ್ಧಿಗೆ ಪ್ರಯತ್ನಿಸಿದ್ದು ಅವರ ಕೆಲಸ ನೆನಪಿನಲ್ಲಿಟ್ಟುಕೊಳ್ಳಬೇಕು' ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್ ಮಾತನಾಡಿ, `ಶಿವಾಜಿ ಪಾರ್ಕ್ ಅಭಿವೃದ್ಧಿಪಡಿಸಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಮಂಡಳಿಯಿಂದ ರೂ.1.50 ಕೋಟಿ ಅನುದಾನ ನೀಡಲಾಗಿದೆ. ತಾಲ್ಲೂಕಿನ ಮಂಠಾಳದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ರೂ. 10 ಕೋಟಿ ಮಂಜೂರು ಮಾಡಿದ್ದೇನೆ. ಹುಲಸೂರನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ರೂ. 15 ಕೋಟಿ ನೀಡಲಾಗಿದೆ. ಹಿಂದುಳಿದ ವರ್ಗಳ ಮತ್ತು ಅಲ್ಪಸಂಖೈಆತರ ಅಭಿವೃದ್ಧಿಗಾಗಿಯೂ ಮಂಡಳಿ ಪ್ರಯತ್ನಿಸುತ್ತಿದೆ' ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ ಮಾತನಾಡಿ, `ಶಿವಾಜಿ ಮಹಾರಾಜರ ಜೀವನ ಮತ್ತು ಸಾಧನೆ ಬಿಂಬಿಸುವ ಶಿವಸೃಷ್ಟಿ ನಿರ್ಮಾಣಕ್ಕಾಗಿ ನಗರದಲ್ಲಿ 10 ಎಕರೆ ಜಮೀನು ಮಂಜೂರಾಗಿದ್ದು ಮುಂದಿನ ಕೆಲಸ ಕೈಗೊಳ್ಳಬೆಕಾಗಿದೆ' ಎಂದರು.

ಸಂಸದ ಸಾಗರ ಖಂಡ್ರೆ ಮಾತನಾಡಿ, `ಶಿವಾಜಿ ಪಾರ್ಕ್ ಅಭಿವೃದ್ಧಿಪಡಿಸುತ್ತಿರುವುದು ಉತ್ತಮ ಕೆಲಸವಾಗಿದೆ. ರಾಷ್ಟ್ರಪುರುಷರ ಕಾರ್ಯದಿಂದ ಎಲ್ಲರೂ ಪ್ರೇರಣೆ ಪಡೆಯಬೇಕು' ಎಂದರು.

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಮಾತನಾಡಿ, `ಶಿವಾಜಿ ಪಾರ್ಕ್ ಸ್ಥಳದಿಂದ ಹೈಟೆನ್ಶನ್ ವಿದ್ಯುತ್ ತಂತಿ ಹಾದು ಹೋಗಿದ್ದರಿಂದ ತೊಂದರೆ ಆಗಿತ್ತು. ಮಾಜಿ ಶಾಸಕ ಬಿ.ನಾರಾಯಣರಾವ್ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಮಸ್ಯೆ ಬಗೆಹರಿಸಿದ್ದಾರೆ' ಎಂದರು.

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮಾತನಾಡಿ, `ಶಿವಸೃಷ್ಟಿ ನಿರ್ಮಾಣಕ್ಕೆ ಬಿಜೆಪಿ ಸರ್ಕಾರವಿದ್ದಾಗ ನೀಡಿದ್ದ ರೂ. 10 ಕೋಟಿ ಅನುದಾನ ಈ ಸರ್ಕಾರ ರದುಗೊಳಿಸಿದ್ದು ಪುನಃ ಮಂಜೂರು ಮಾಡಬೇಕು' ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಮಾತನಾಡಿ, `ಶಿವಾಜಿ ಪಾರ್ಕ್ ಅಭಿವೃದ್ಧಿಗೆ ಅನೇಕ ವರ್ಷಗಳಿಂದ ಆಗ್ರಹಿಸಲಾಗುತ್ತಿತ್ತು. ಕಲ್ಯಾಣ ಕರ್ನಾಟಕ ಮಂಡಳಿಯಿಂದ ಅನುದಾನ ದೊರೆತಿದ್ದರಿಂದ ಬಹುದಿನದ ಕನಸು ನನಸು ಆಗುತ್ತಿರುವುದಕ್ಕೆ ಸಂತಸವಾಗಿದೆ. ನಮ್ಮ ತಂದೆಯವರಾದ ಧರ್ಮಸಿಂಗ್ ಅವರಿಗೆ ಸಂಸದರಾಗಲು ಮರಾಠಾ ಸಮಾಜ ಸಹಕರಿಸಿದ್ದು ನನ್ನ ಪ್ರತಿ ಕೆಲಸದಲ್ಲೂ ಈ ಸಮಾಜ ಬೆಂಬಲಿಸುತ್ತದೆ ಎಂಬ ಭರವಸೆಯಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.