ಬೀದರ್: ನಗರದ ‘ನರ್ಚರ್ ಕೋಚಿಂಗ್ ಸೆಂಟರ್’ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತೆರಿಗೆ ಪಾವತಿಸದೇ ವಂಚಿಸಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಐ.ಟಿ ಅಧಿಕಾರಿಗಳು ಭಾನುವಾರ ಕೇಂದ್ರದ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ‘ಕೋಚಿಂಗ್ ಸೆಂಟರ್ ನವರು ಪ್ರತಿಯೊಬ್ಬ ವಿದ್ಯಾರ್ಥಿಯಿಂದ ₹1 ಸಾವಿರ ಪಡೆದು, ಪುಸ್ತಕ, ಬಟ್ಟೆಗಳನ್ನು ಮಾರುಕಟ್ಟೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ತೆರಿಗೆ ಕೂಡ ಭರಿಸಿಲ್ಲ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪರಿಶೀಲಿಸಿದ್ದು, ವಾರದೊಳಗೆ ತೆರಿಗೆ ಪಾವತಿಗೆ ಗಡುವು ನೀಡಲಾಗಿದೆ. ಎಲ್ಲ ಕೋಚಿಂಗ್ ಸೆಂಟರ್ಗಳು ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಿಸಿ ತೆರಿಗೆ ಪಾವತಿಸಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಐ.ಟಿ ಇಲಾಖೆಯ ಆಯುಕ್ತ ಡಾ. ಮಹೇಶ ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.