ಹುಮನಾಬಾದ್: ‘ಪಟ್ಟಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಯಶಸ್ಸಿಗೆ ಜನರ ಸಹಕಾರ ಅಗತ್ಯ’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ವೀರಭದ್ರೇಶ್ವರ ದೇವಾಲಯ, ಪುರಾತನ ದೇವಸ್ಥಾನಗಳಲ್ಲಿ ಒಂದಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನ ಆಗಮಿಸುತ್ತಾರೆ. ಸಂಬಂಧಪಟ್ಟ ಪುರಸಭೆ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಯವರು ಭಕ್ತರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಮಾಣಿಕನಗರದ ಮಾಣಿಕ್ಯ ಸೌಧದಲ್ಲಿ ಫೆ,3 ರಂದು ಡಾ.ಜ್ಞಾನರಾಜ ಮಹಾರಾಜರ ನೇತೃತ್ವದಲ್ಲಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ ಗುರೂಜಿ ಅವರ ಪ್ರವಚನ ಮತ್ತು ಮಾಣಿಕ ಪ್ರಭು ಶಿಕ್ಷಣ ಸಂಸ್ಥೆಯ ಪ್ರಾರ್ಥನಾ ಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಸಬೇಕು ಎಂದು ತಿಳಿಸಿದರು.

ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬತಲಿ, ಕಸಾಪ ಅಧ್ಯಕ್ಷ ಸಚ್ಚಿದಾನಂದ ಮಠಪತಿ, ಡಾ.ಶಶಿಕಾಂತ ಹಾರಕೂಡ, ಬೀದರ್ ಆರ್ಟ್ ಆಫ್ ಲಿವಿಂಗ್‍ನ ಯೋಗ ಶಿಕ್ಷಕಿ ಪ್ರೀತಿ ಪಾಟೀಲ, ರಾಮ ಮತ್ತು ರಾಜ ಶಿಕ್ಷಣ ಸಂಸ್ಥೆಯ ಮುಖ್ಯದತ್ತಿ ರಮೇಶ ಎಂ. ಗಾದಾ ಹಾಗೂ ಪುರಸಭೆ ಸದಸ್ಯ ನಾಗರಾಜ ಹಿಬಾರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.