ಬೀದರ್: ‘ಇತ್ತೀಚೆಗೆ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಬೆಳೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮಾಜಿಸಚಿವರೂ ಆದ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪುರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಗ್ರಹಿಸಿದ್ದಾರೆ.

ಅವರು ಈ ಸಂಬಂಧ ಮುಖ್ಯಮಂತ್ರಿಯವರಿಗೆ ಪತ್ರ ಬರೆದು, ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ನಿರಂತರ ಮಳೆಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ತಗ್ಗು ಪ್ರದೇಶದ ಜಮೀನುಗಳಲ್ಲಿ ಬೆಳೆಸಿದ್ದ ಬೆಳೆ ಹಾಳಾಗಿದೆ. ಕಾರಂಜಾ ಹಿನ್ನೀರಿನ ಭಾಗ ಮತ್ತು ಹಳ್ಳಗಳ ಹತ್ತಿರದ ರೈತರ ಜಮೀನುಗಳಲ್ಲಿ ನೀರು ನಿಂತು ಬಿತ್ತನೆ ಮಾಡಿದ್ದ ಉದ್ದು, ಹೆಸರು, ಸೋಯಾ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿವೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ರೈತರು ಬೆಳೆ ಬೆಳೆಸಿದ್ದರು. ಈಗ ಅದೆಲ್ಲ ಹಾಳಾಗಿ ಹೋಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸಚಿವರು, ಅಧಿಕಾರಿಗಳಿಗೆ ಸೂಚನೆ ಕೊಟ್ಟು ಶೀಘ್ರ ಬೆಳೆ ಹಾನಿ ಸಮೀಕ್ಷೆ ಮಾಡಿ, ಹಾನಿಯ ವರದಿ ತರಿಸಿಕೊಂಡು ಬೆಳೆ ಕಳೆದುಕೊಂಡಿರುವ ರೈತರ ಪ್ರತಿ ಎಕರೆಗೆ ಕನಿಷ್ಠ ₹25 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.