ಬೀದರ್: ಮೂರು ಅವಧಿಗೆ ಶಾಸಕರಾಗಿದ್ದ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೂ ರಹೀಂ ಖಾನ್ ಅವರಿಗೆ ಕ್ರೀಡಾ ಖಾತೆ ಕೊಡಲಾಗಿತ್ತು. ಈಗ ಸಿದ್ದರಾಮಯ್ಯ ಸರ್ಕಾರದಲ್ಲೇ ಮತ್ತೆ ಸಚಿವ ಸ್ಥಾನ ಕೊಡಲಾಗಿದೆ.

ಗುರುಪಾದಪ್ಪ ನಾಗಮಾರಪಳ್ಳಿ ಅವರ ನಿಧನದ ನಂತರ ಬೀದರ್ ಕ್ಷೇತ್ರದಲ್ಲಿ ರಹೀಂ ಖಾನ್ ಅವರೇ ಸತತ ಮೂರನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ರೂಹಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಇವರು ಬೀದರ್ ಹಾಗೂ ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ಹೊಂದಿದ್ದಾರೆ.

ಎಸ್ಸೆಸ್ಸೆಲ್ಸಿ ವರೆಗೆ ಓದಿದರೂ ಶಿಕ್ಷಣ ಸಂಸ್ಥೆ ಕಟ್ಟಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ. ಇವರಿಗೆ ಇಬ್ಬರು ಪತ್ನಿಯರು ಹಾಗೂ ಆರು ಮಕ್ಕಳು ಇದ್ದಾರೆ. ವಿರೋಧ ಪಕ್ಷಗಳು ಎಷ್ಟೇ ಟೀಕೆ ಮಾಡಿದರೂ ತಲೆ ಕೆಡಿಸಿಕೊಂಡವರಲ್ಲ. ಅದಕ್ಕೆ ಪ್ರತಿಕ್ರಿಯೆ ನೀಡಿದವರೂ ಅಲ್ಲ. ಒಮ್ಮೆಯೂ ಬಹಿರಂಗವಾಗಿ ಪತ್ರಿಕಾಗೋಷ್ಠಿ ನಡೆಸಿದ ಉದಾಹರಣೆ ಇಲ್ಲ. ಸದಾ ವಿವಾದಗಳಿಂದ ದೂರವೇ ಉಳಿಯಲು ಬಯಸಿದವರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.