ಬೀದರ್: ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಶನಿವಾರ ಬೆಳಿಗ್ಗೆಯಿಂದ ಸತತ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಳಿಗ್ಗೆ ಆರಂಭಗೊಂಡ ಜಿಟಿಜಿಟಿ ಮಳೆ ಈಗ ಬಿರುಸು ಪಡೆದಿದೆ. ಮಳೆಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ದೈನಂದಿನ ಕೆಲಸಗಳಿಗೆ ಹೋಗುವವರು ತೊಂದರೆ ಅನುಭವಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹಗೊಂಡಿದ್ದರಿಂದ ವಾಹನ ಸಂಚಾರ ನಿಧಾನಗೊಂಡಿದೆ. ಭಾಲ್ಕಿ-ಬೀದರ್ ರಸ್ತೆಯ ಬಸವೇಶ್ವರ ವೃತ್ತದಲ್ಲಿ ಅಪಾರ ನೀರು ಸಂಗ್ರಹವಾಗಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ.

ಶುಕ್ರವಾರ ಸಂಜೆ ಆರಂಭಗೊಂಡ ಜಿಟಿಜಿಟಿ ಮಳೆ ರಾತ್ರಿಯಿಡೀ ಸುರಿಯಿತು. ನಸುಕಿನ ಜಾವ ಕೆಲ ಸಮಯ ಬಿಡುವು ಕೊಟ್ಟ ಮಳೆ ಪುನಃ ಆರಂಭಗೊಂಡಿದ್ದು, ಸತತ ಸುರಿಯುತ್ತಿದೆ.
.ಶಿವಮೊಗ್ಗ: ಜಲಪಾತಗಳ ಬಳಿ ಸೆಲ್ಫಿಗೆ ನಿಷೇಧ, ತುರ್ತು ನೆರವಿಗೆ 112ಗೆ ಕರೆಗೆ ಸೂಚನೆ.Karnataka Rains: ತುಂಗಭದ್ರಾ ಜಲಾಶಯದಿಂದ ನದಿಗೆ ಯಾವುದೇ ಕ್ಷಣದಲ್ಲಿ ನೀರು.Karnataka Rains | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ.ಶಿಕಾರಿಪುರ | ಧಾರಾಕಾರ ಮಳೆ: ಮನೆ ಗೋಡೆ ಕುಸಿದು ನಾಲ್ವರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.