ಬೀದರ್: ‘ಸಿದ್ದರಾಮಯ್ಯ ಸುಳ್ಳಿನ ಮುಖ್ಯಮಂತ್ರಿ. ರೈತರಿಗೆ ಕೊಟ್ಟ ಮಾತು ಮುರಿಯುತ್ತಿದ್ದಾರೆ. ಹಣದ ಹಿಂದೆ ಬಿದ್ದಿದ್ದಾರೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದರು.

ಅಧಿಕಾರ ಹಿಡಿಯಲು ಏನೇನು ನಾಜೂಕುತನ, ಸುಳ್ಳು ಹೇಳಬೇಕಿತ್ತೋ ಹೇಳಿದ್ದರು. ಈಗ ಕೊಟ್ಟ ಮಾತುಗಳನ್ನು ಮರೆತು ಹೋಗಿದ್ದಾರೆ. ಸಚಿವ ಶಿವಾನಂದ ಪಾಟೀಲ ಅವರ ಮೂಲಕ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ನಾಟಕ ಹಿಂದಿನ ಅಧಿವೇಶನದಲ್ಲಿ ಮಾಡಿದ್ದಾರೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದ ನಂತರ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಅವುಗಳನ್ನು ಹಿಂತೆಗೆದುಕೊಂಡಿತು. ಆದರೆ, ರಾಜ್ಯದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದರು. ಇದರ ವಿರುದ್ಧ ರಾಜ್ಯದಲ್ಲಿ ಹೋರಾಟ ನಡೆಸಿದಾಗ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ನಮ್ಮ ಹೋರಾಟಗಳಲ್ಲಿ ಭಾಗವಹಿಸಿ, ನಮ್ಮ ಸರ್ಕಾರ ಬಂದ ನಂತರ ಮೂರೂ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಈಗ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಬಹಳ ನಾಜೂಕಿನಿಂದ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ವಿದ್ಯುತ್ಶಕ್ತಿ ಇಲಾಖೆಯಿಂದ ಹಿಂದೆ ನೆರವು ನೀಡಲಾಗುತ್ತಿತ್ತು. ಈಗ ಹೊಸದಾಗಿ ಆದೇಶ ಹೊರಡಿಸಿ, ರೈತರು ಅವರ ಖರ್ಚಿನಲ್ಲಿಯೇ ಅಗತ್ಯ ವಸ್ತುಗಳನ್ನು ತರಿಸಿಕೊಂಡು ಸಂಪರ್ಕ ಪಡೆಯಬೇಕು ಎಂದು ಆದೇಶ ಹೊರಡಿಸಿದ್ದಾರೆ. ರೈತರ ಹಿತ ಕಾಪಾಡಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ಓಟಿಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಹೊರತು ರೈತರು, ಜನಸಾಮಾನ್ಯರ ಕಲ್ಯಾಣಕ್ಕಾಗಿ ಅಲ್ಲ. ಹಿಂದೆ ಬಿಜೆಪಿಯವರು ಏನು ಮಾಡುತ್ತಿದ್ದರೋ ಅದನ್ನೇ ಈಗ ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಹೆಸರಷ್ಟೇ ಬದಲಾಗಿದೆ. ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತಾರೆ ಎಂದು ರೈತರು ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ರೈತರು ರಾಜಕೀಯ ಪಕ್ಷವೊಂದನ್ನು ಬೆಂಬಲಿಸಿದ್ದರು. ಆದರೆ, ಹಾಲಿ ಸರ್ಕಾರ ಮಾಡುತ್ತಿರುವುದೇ ಬೇರೆ ಎಂದರು.

ಬರದಿಂದ ₹1 ಲಕ್ಷ ಕೋಟಿ ನಷ್ಟ ರೈತರಿಗೆ ಉಂಟಾಗಿದೆ. ಆದರೆ, ರಾಜ್ಯ ಸರ್ಕಾರ ₹330 ಕೋಟಿ ಬಿಡುಗಡೆಗೊಳಿಸಿದೆ. ಇದುವರೆಗೆ ಜಿಲ್ಲಾಧಿಕಾರಿಗಳ ಖಾತೆಗೆ ಹಣ ಜಮೆ ಆಗಿಲ್ಲ. ಪರಿಹಾರ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಇಚ್ಛಾಶಕ್ತಿಯೇ ಇಲ್ಲ. ಯುದ್ದೋಪಾದಿಯಲ್ಲಿ ಕೆಲಸಗಳೇ ಆಗುತ್ತಿಲ್ಲ ಎಂದು ಆರೋಪಿಸಿದರು.

1961ರ ಭೂಸುಧಾರಣಾ ಕಾಯ್ದೆ ರದ್ದುಪಡಿಸಿ 2020ರ ಕಾಯ್ದೆ ಜಾರಿಗೆ ಬಂದ ಮೇಲೆ ರೈತರಿಂದ ಭೂಮಿ ಕೈತಪ್ಪಿ ಹೋಗುತ್ತಿದೆ. ಸಿರಿವಂತರು ಅವರ ಹಣವೆಲ್ಲ ಜಮೀನು ಖರೀದಿಗೆ ವಿನಿಯೋಗಿಸುತ್ತಿದ್ದಾರೆ. ಇದುವರೆಗೆ ಕಾರ್ಪೊರೇಟ್ನವರು ಹೆಜ್ಜೆ ಇಟ್ಟಿಲ್ಲ. ಅವರು ಬಂದ ನಂತರ ಸಂಪೂರ್ಣ ಕೃಷಿ ಜಮೀನು ಅವರ ಕೈಸೇರಲಿದೆ. ಇದು ಅಪಾಯಕಾರಿ ಬೆಳವಣಿಗೆ. ಸಾಮಾನ್ಯ ರೈತರಿಗೆ ಇದರ ಬಗ್ಗೆ ಗೊತ್ತಿಲ್ಲ ಎಂದರು.

ಹಿಂದೆ ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಕೆಲಸ ನಿರ್ವಹಿಸುತ್ತಿದ್ದವು. ಈಗ ಬೆಳಿಗ್ಗೆ 8ರಿಂದ ರಾತ್ರಿ 8ರ ವರೆಗೆ ಕೆಲಸ ಮಾಡುತ್ತಿವೆ. ಕೃಷಿ ಜಮೀನು ಎಷ್ಟು ವೇಗವಾಗಿ ಸಿರಿವಂತರ ಪಾಲಾಗುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಉಪನೋಂದಣಾಧಿಕಾರಿ ಕಚೇರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ₹25 ಸಾವಿರ ಕೋಟಿ ಆದಾಯ ಬರುತ್ತಿದೆ. ಹೊಸ ಸಮಯದಿಂದ ಹೆಚ್ಚುವರಿಯಾಗಿ ₹9 ಸಾವಿರ ಕೋಟಿ ವರ್ಷಕ್ಕೆ ಬರಲಿದೆ. ಗ್ಯಾರಂಟಿಗಳ ಅನುಷ್ಠಾನದಿಂದ ಸರ್ಕಾರದ ಬಳಿ ಹಣವಿಲ್ಲ. ಈ ರೀತಿ ಹಣ ಕಲೆ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಿರ್ಸಿ, ಮುಖಂಡರಾದ ಮಲ್ಲಿಕಾರ್ಜುನ ಚಕ್ಕಿ, ಶಿವಾನಂದ ಬಿರಾದಾರ, ಮಹಾದೇವ ನಾಗೂರೆ ಹಾಜರಿದ್ದರು.

‘ರಾಹುಲ್ ಗಾಂಧಿ ಹೇಳಿಕೆ ವಿರೋಧಿಸಿ ಹೈದರಾಬಾದ್ನಲ್ಲಿ ಧರಣಿ’

‘ದೇಶದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿ, ರೈತರ ಹೋರಾಟಕ್ಕೆ ಬೆಂಬಲಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ, ತೆಲಂಗಾಣದ ಬಿಎಸ್ಆರ್ ಪಕ್ಷ ಅದನ್ನು ಬೆಂಬಲಿಸಿತ್ತು ಎಂದು ಹೈದರಾಬಾದ್ನಲ್ಲಿ ಹೇಳಿದ್ದರು. ಆದರೆ, ಅವರದ್ದೇ ಸರ್ಕಾರವಿರುವ ಕರ್ನಾಟಕದಲ್ಲಿ ಏನಾಗುತ್ತಿದೆ ಎನ್ನುವುದು ಅವರಿಗೆ ಗೊತ್ತಿಲ್ಲ. ಅವರು ಹೇಳಿಕೆ ಕೊಟ್ಟ ಹೈದರಾಬಾದ್ನಲ್ಲಿಯೇ ಧರಣಿ ನಡೆಸಲು ನಿರ್ಧರಿಸಲಾಗಿದೆ’ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲೂ ಹೋರಾಟ ನಡೆಸಲಾಗುವುದು. ನೂರಾರು ರೈತರಿಂದ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.