ಬೀದರ್: ‘ಕಾನೂನು ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾನೂನು ಸಾಕ್ಷರತಾ ರಥ ಯಾತ್ರೆಯನ್ನು ಹಮ್ಮಿಕೊಂಡಿದೆ’ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಕಾನೂನು ಅರಿವು ನೆರವು ಕಾರ್ಯಕ್ರಮದ ಅಂಗವಾಗಿ ಕಾನೂನು ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಾನೂನು ಸಾಕ್ಷರತಾ ರಥವು ಪ್ರತಿ ದಿನ ಮೂರು ಹಳ್ಳಿಗಳಿಗೆ ತೆರಳಲಿದೆ. ಜಿಲ್ಲೆಯ ಒಟ್ಟು 60 ಹಳ್ಳಿಗಳಲ್ಲಿ ಸಂಚರಿಸಿ
ಗ್ರಾಮೀಣ ಜನರಿಗೆ ಕಾನೂನು ತಿಳಿವಳಿಕೆ ನೀಡಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಕಾನೂನಿನ ಅರಿವು ಇಲ್ಲದ ಕಾರಣ ಗೊತ್ತಿಲ್ಲದಂತೆಯೂ ಕೆಲವು ಅಪರಾಧಗಳನ್ನು ಮಾಡುತ್ತಿದ್ದಾರೆ. ಕಾನೂನುಗಳ ಬಗ್ಗೆ ಅರಿತುಕೊಂಡರೆ ಅವರಲ್ಲಿ ಭಯ ಇರುತ್ತದೆ. ಇದರಿಂದ ಅಪರಾಧ ಕೃತ್ಯಗಳು ನಡೆಯದಂತೆ ಎಚ್ಚರ ವಹಿಸಬಹುದು’ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಚಂದ್ರಕಾಂತ ನಾಸಿ, ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಚಂದ್ರಶೇಖರ ರೆಡ್ಡಿ, ಹಿರಿಯ ಸಿವಿಲ್ ನ್ಯಾಯಾಧೀಶೆ ನಿರ್ಮಲಾದೇವಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಜೀವನರಾವ್ ಕುಲಕರ್ಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್. ರಾಘವೇಂದ್ರ, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕೆ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ರೇಯಾಂಕ ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಇನಾಯತ್ ಅಲಿ ಸಿಂಧೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧನರಾಜ ಬೋರಾಳೆ, ವಕೀಲರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಸತೀಶ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಸಂತೋಷ ತರನಳ್ಳಿ, ಪ್ರೊಬೆಷನರಿ ಸಿವಿಲ್ ನ್ಯಾಯಾಧೀಶ ಗಂಗಾರಾಮ ಬಡಿಗೇರ ಇದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ವಕೀಲರ ಸಂಘ, ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್
ಇಲಾಖೆ, ಆರೋಗ್ಯ ಇಲಾಖೆ, ವಾರ್ತಾ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.