ಬೀದರ್: ನಗರದ ಮಹಮೂದ್ ಗಾವಾನ್ ಮದರಸಾವನ್ನು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ದತ್ತು ಪಡೆದಿದೆ.

ಶಾಹೀನ್ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್ ಅವರು ಈ ಸಂಬಂಧ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ನಿರ್ದೇಶಕ ಜುಲ್ಫೆಕಾರ್ ಅಲಿ ಅವರೊಂದಿಗೆ ನವದೆಹಲಿಯಲ್ಲಿ ಬುಧವಾರ ಒಡಂಬಡಿಕೆ ಮಾಡಿಕೊಂಡರು.

ಸಮೂಹವು ಐದು ವರ್ಷ ಸ್ಮಾರಕದ ನಿರ್ವಹಣೆ ಜವಾಬ್ದಾರಿ ಹೊತ್ತುಕೊಂಡಿದೆ. ಶುದ್ಧ ಕುಡಿಯುವ ನೀರು, ಶೌಚಾಲಯ, ತ್ಯಾಜ್ಯ ನಿರ್ವಹಣೆ, ಶಿಶು ಪಾಲನಾ ಕೊಠಡಿ, ರ್‍ಯಾಂಪ್ ನಿರ್ಮಾಣ, ವಿದ್ಯುತ್ ಚಾಲಿತ ರಿಕ್ಷಾ, ಆಹಾರ ಮಳಿಗೆ, ದೀಪಾಲಂಕಾರ, ವಾಚನಾಲಯ, ಪ್ರಥಮ ಚಿಕಿತ್ಸಾ ಕೇಂದ್ರ, ಸಿಸಿಟಿವಿ ಕ್ಯಾಮೆರಾ, ವೈ-ಫೈ ಮೊದಲಾದ ಸೌಲಭ್ಯಗಳನ್ನು ಒದಗಿಸಲಿದೆ. ಗೈಡ್‌ಗಳನ್ನು ಸಹ ನೇಮಕ ಮಾಡಿಕೊಳ್ಳಲಿದೆ.

ಸ್ಮಾರಕ ದತ್ತು ಯೋಜನೆಯಡಿ ಮದರಸಾವನ್ನು ದತ್ತು ತೆಗೆದುಕೊಳ್ಳಲಾಗಿದೆ. 14ನೇ ಶತಮಾನದಲ್ಲಿ ಮದರಸಾ ವಿಶ್ವವಿದ್ಯಾಲಯ ಆಗಿತ್ತು. ದೇಶ, ವಿದೇಶದ ವಿದ್ಯಾರ್ಥಿಗಳು ಇಲ್ಲಿಗೆ ಅಧ್ಯಯನಕ್ಕೆ ಬರುತ್ತಿದ್ದರು. ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರು ಕಲೆ, ಇತಿಹಾಸ, ಪರಂಪರೆಯ ಹೆಗ್ಗುರುತು ಆಗಿರುವ ಜಿಲ್ಲೆಯ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳು ಇವೆ. ಪ್ರವಾಸೋದ್ಯಮ ಬೆಳೆದರೆ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಅಬ್ದುಲ್ ಖದೀರ್ ತಿಳಿಸಿದ್ದಾರೆ.

14ನೇ ಶತಮಾನದ ಪ್ರಸಿದ್ಧ ಶಿಕ್ಷಣ ಕೇಂದ್ರ

ಬಹಮನಿ ರಾಜವಂಶರ ಕಾಲದಲ್ಲಿ ಪ್ರಧಾನಿ ಆಗಿದ್ದ ಮಹಮೂದ್ ಗಾವಾನ್ ಅವರು 1472 ರಲ್ಲಿ ಕಟ್ಟಿಸಿದ ಮದರಸಾ ಆ ಕಾಲದಲ್ಲಿ ಪ್ರಸಿದ್ಧ ಶಿಕ್ಷಣ ಕೇಂದ್ರವಾಗಿತ್ತು. ಒಂದು ಸಾವಿರ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅವಕಾಶ ಇತ್ತು. ಅರೇಬಿಕ್ ಹಾಗೂ ಪರ್ಷಿಯನ್ ಭಾಷೆಗಳಲ್ಲಿ ಶಿಕ್ಷಣ ನೀಡಲಾಗುತ್ತಿತ್ತು. ಮೂರು ಸಾವಿರ ಪುಸ್ತಕಗಳ ಗ್ರಂಥಾಲಯ ಹೊಂದಿತ್ತು. ಪ್ರಾರ್ಥನಾ ಸ್ಥಳ, ಉಪನ್ಯಾಸ ಸಭಾಂಗಣ, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ವಸತಿ ಗೃಹಗಳು ಸೇರಿ ವಿವಿಧ ರೀತಿಯ ವ್ಯವಸ್ಥೆ ಹೊಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.