ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಬೀದರ್‌ನಲ್ಲಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

Published : 17 ಸೆಪ್ಟೆಂಬರ್ 2024, 4:19 IST
Last Updated : 17 ಸೆಪ್ಟೆಂಬರ್ 2024, 4:19 IST
ಫಾಲೋ ಮಾಡಿ
Comments

ಬೀದರ್: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ,‌ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು.

ಆನಂತರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಈಶ್ವರ ಬಿ. ಖಂಡ್ರೆ, ಅನೇಕರ ತ್ಯಾಗ, ಬಲಿದಾನದಿಂದ ಕಲ್ಯಾಣ ಕರ್ನಾಟಕಕ್ಕೆ 1948, ಸೆಪ್ಟೆಂಬರ್ 17ರಂದು ವಿಮೋಚನೆ ದೊರೆತಿದೆ. ವಿಮೋಚನೆಯ ಹೋರಾಟದಲ್ಲಿ ಬೀದರ್ ಜಿಲ್ಲೆಯ ಹೋರಾಟಗಾರ ಕೊಡುಗೆ ಬಹಳ ದೊಡ್ಡದಿದೆ ಎಂದರು.

ಇದಕ್ಕೂ ಮುನ್ನ ನಗರದಲ್ಲಿ ಅಲಂಕರಿಸಿದ ವಾಹನದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಸಂಸದ ಸಾಗರ್ ಖಂಡ್ರೆ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿಸಿಎಫ್ ವಾನತಿ ಎಂ.ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT