ಬೀದರ್: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭಾನುವಾರ ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯ ಇಲಾಖೆಯಿಂದ ಭಾಲ್ಕಿ ಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಖಂಡ್ರೆಯವರು ಮಗುವಿಗೆ ಲಸಿಕೆ ಹಾಕುವುದರ ಮೂಲಕ ಪೋಲಿಯೊ ಅಭಿಯಾನಕ್ಕೆ ಚಾಲನೆ ಕೊಟ್ಟರು.

ಇನ್ನು, ನಗರದ ‘ಓಯಸ್ಟರ್ ಸ್ಕೂಲ್ ಆಫ್ ಎಕ್ಸಲೆನ್ಸ್’ನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ಅವರು ಅಭಿಯಾನದ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಾರ್ಚ್ 6ರ ವರೆಗೆ ಲಸಿಕೆ ಅಭಿಯಾನ ನಡೆಯಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಎಲ್ಲರೂ ಲಸಿಕೆ ಹಾಕಿಸಬೇಕು. ಇದರಿಂದ ಅಂಗವೈಕಲ್ಯ ಬರದಂತೆ ತಡೆಯಬಹುದು ಎಂದು ಹೇಳಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಡಾ. ಗೀತಾ ಬಾಲಿ ಮಾತನಾಡಿ, 2011ರಲ್ಲಿ ಭಾರತದಲ್ಲಿ ಕೊನೆಯ ಪೋಲಿಯೊ ಪ್ರಕರಣ ಪತ್ತೆಯಾಗಿತ್ತು. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಪೋಲಿಯೊ ಮುಕ್ತ ಭಾರತವೆಂದು ಘೋಷಿಸಿದೆ. ಆದರೂ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನಗಳಲ್ಲಿ ಈಗಲೂ ಪೋಲಿಯೊ ಪ್ರಕರಣಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಶಿವಶಂಕರ ಬಿ., ಜಿಲ್ಲಾ ಕಾರ್ಯಕ್ರಮ ಸಂಯೋಜಕ ಶಿವಶಂಕರ ಬೆಮಳಗಿ, ಡಾ. ಮೊಹಮ್ಮದ್ ಸೋಹೆಲ್, ಡಾ.ಕಿರಣ ಪಾಟೀಲ, ಡಾ. ರಾಜಶೇಖರ ಪಾಟೀಲ, ಡಾ. ಶಂಕ್ರೆಪ್ಪಾ ಬೊಮ್ಮಾ, ಡಾ. ದಿಲೀಪ್ ಡೋಂಗರೆ, ಡಾ. ಅನಿಲ ಚಿಂತಾಮಣಿ, ಡಾ. ಸಂಗಾರೆಡ್ಡಿ, ಶಾಲೆಯ ಅಧ್ಯಕ್ಷ ಮಂಜೂರ್ ಇರ್ಫಾನ್, ಉಮೇಶ ಬಿರಾದಾರ, ಲೋಕೇಶ ಸಲಗರ, ಅಶೋಕ, ದೇವಿದಾಸ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.