ಔರಾದ್: ತಾಲ್ಲೂಕಿನ ಬಲ್ಲೂರ್ ಬಳಿ ₹ 90 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಬೇಕಾದ ಸಿಪೆಟ್ (ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಾಜಿ) ಕಟ್ಟಡ ಕಾಮಗಾರಿ ಆರಂಭಿಸಬೇಕು’ ಎಂದು ಶಾಸಕ ಪ್ರಭು ಚವಾಣ್ ಮನವಿ ಮಾಡಿದ್ದಾರೆ. ಶಾಸಕರು ಈಚೆಗೆ ಸಣ್ಣ ಕೈಗಾರಿಕೆ ಇಲಾಖೆ ಸಚಿವ ಶರಣಬಸಪ್ಪ ದರ್ಶನಾಪುರ ಅವರನ್ನು ಭೇಟಿ ಮಾಡಿ ಸಿಪೆಟ್ ಕಾಮಗಾರಿ ಕುರಿತು ಸಮಾಲೋಚಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಕೆಲಸವಾಗಬೇಕಿದೆ. ಈಗಾಗಲೇ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಪೆಟ್ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಆದರೆ ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ಹೀಗಾಗಿ ಕಾಮಗಾರಿ ಆರಂಭಿಸಬೇಕು ಎಂದು ಸಚಿವರ ಗಮನ ಸೆಳೆದಿದ್ದಾರೆ.

ಈ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಾಕಷ್ಟು ಪ್ರಯತ್ನದಿಂದಾಗಿ ಸಿಪೆಟ್ ಕೇಂದ್ರಕ್ಕೆ ಮಂಜೂರಾತಿ ಸಿಕ್ಕಿದೆ. ತಾವು ಮನಸ್ಸು ಮಾಡಿ ಕೂಡಲೇ ಕಾಮಗಾರಿ ಆರಂಭಿಸಲು ಸಂಬಂಧಿಸಿದವರಿಗೆ ಸೂಚಿಸಲು ಮನವಿ ಮಾಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

ಸಚಿವರು, ತಮ್ಮ ಮನವಿಗೆ ಸ್ಪಂದಿಸಿದ್ದು, ಶೀಘ್ರದಲ್ಲಿ ಸಿಪೆಟ್ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.