ಬೀದರ್: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಮರನಾಥ ಪಾಟೀಲ ಪರ ಕೇಂದ್ರ ಸಚಿವ ಭಗವಂತ ಖೂಬಾ ಅವರು ಸೋಮವಾರ ಬಿರುಸಿನ ಪ್ರಚಾರ ನಡೆಸಿದರು.

ನಗರದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು, ಗುರುನಾನಕ ಎಂಜಿನಿಯರಿಂಗ್ ಕಾಲೇಜು, ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ಕಾಲೇಜುಗಳಿಗೆ ಭೇಟಿ ನೀಡಿ, ಪದವೀಧರರಿಗೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

‘ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಕೇವಲ ದುರಾಡಳಿತ ನಡೆಯುತ್ತಿದೆ. ಒಂದೇ ಒಂದು ಅಭಿವೃದ್ದಿ ಕೆಲಸಗಳು ಪ್ರಾರಂಭವಾಗಿಲ್ಲ. ಎಸ್.ಸಿ./ಎಸ್.ಟಿ ಜನರ ಅನುದಾನವನ್ನು ಬೇರೆ ಕೆಲಸಗಳಿಗೆ ಉಪಯೋಗಿಸಿ ಅವರಿಗೂ ಅನ್ಯಾಯ ಮಾಡಲಾಗುತ್ತಿದೆ. ಧರ್ಮಾಧಾರಿತ ಕಾನೂನುಗಳು ತಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಮೀಸಲಾತಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ವಿಧಾನ ಪರಿಷತ್ತಿನಲ್ಲಿ ಕಾನೂನು ಜಾರಿಗೆ ತರಲು ಅಗತ್ಯ ಸಂಖ್ಯಾ ಬಲ ಇಲ್ಲ. ಪದವೀಧರ ಚುನಾವಣೆಯಲ್ಲಿ ಪದವೀಧರರು ಇದನ್ನು ಅರಿತುಕೊಂಡು ಬಿಜೆಪಿಯನ್ನು ಬೆಂಬಲಿಸಬೇಕು. ಅಮರನಾಥ ಪಾಟೀಲ ಅವರು ಸೌಮ್ಯ ಸ್ವಭಾವದ ವ್ಯಕ್ತಿ. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಎಂದರು.

ಬಿಜೆಪಿ ಮುಖಂಡರಾದ ಬಾಬುವಾಲಿ, ರೇವಣಸಿದ್ದಪ್ಪ ಜಲಾದೆ, ಶಶಿಧರ ಹೊಸಳ್ಳಿ, ಸುರೇಶ ಮಾಶೆಟ್ಟಿ, ಶಕುಂತಲಾ ಬೆಲ್ದಾಳೆ, ಶಿವಕುಮಾರ ನಿಡೊದಾ, ಗುರುನಾಥ ರಾಜಗೀರ, ಸಚ್ಚಿದಾನಂದ ಚಿದ್ರೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.