ಬೀದರ್: ‘ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನ ಬದಲಿಸಲ್ಲ, ಬದಲಾಗಿ ಅದನ್ನು ಬಲಪಡಿಸುತ್ತಾರೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ ಅಠವಾಳೆ ತಿಳಿಸಿದರು.

ನಗರದಲ್ಲಿ ಸೋಮವಾರ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಂವಿಧಾನ ಬದಲಿಸುವುದು ಯಾರಿಂದಲೂ ಆಗದು. ಆ ಅಧಿಕಾರ ಯಾರಿಗೂ ಇಲ್ಲ. ಆದರೆ, ಹೊಸ ಕಾನೂನುಗಳನ್ನು ಮಾಡಬಹುದು. ಮಹಿಳಾ ಮೀಸಲಾತಿ, ಆರ್ಥಿಕವಾಗಿ ದುರ್ಬಲವಾದವರಿಗೆ ಶೇ 10ರಷ್ಟು ಮೀಸಲಾತಿಯಂತಹ ಕಾನೂನುಗಳನ್ನು ತರಬಹುದು’ ಎಂದರು.

‘ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಅತ್ಯುತ್ತಮವಾದ ಸಂವಿಧಾನ ಕೊಟ್ಟಿದ್ದಾರೆ. ಅದನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ.ಆದರೆ, ಮೋದಿಯವರು ಡಾ.ಅಂಬೇಡ್ಕರ್ ಅವರ ಆಶಯಗಳನ್ನು ಜಾರಿಗೆ ತರಲು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಇದರಲ್ಲಿ ಎಲ್ಲ ಧರ್ಮೀಯರು ಇದ್ದಾರೆ. ಎಲ್ಲೆಡೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.