ಬೀದರ್: ಅಪ್ರಾಪ್ತ ಬಾಲಕಿಯ ಅಸ್ವಾಭಾವಿಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಬೆಮಳಖೇಡ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಚಯ್ಯ ಮಠಪತಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅಮಾನತುಗೊಳಿಸಿದ್ದಾರೆ.

‘ಅಪ್ರಾಪ್ತ ಬಾಲಕಿ ಅಸಹಜ ಸಾವಿನ ಕುರಿತು ಅವರ ಕುಟುಂಬದವರು ಠಾಣೆಗೆ ದೂರು ಕೊಡಲು ಬಂದಿದ್ದರು. ಆದರೆ, ಆ ದೂರನ್ನು ಸ್ವೀಕರಿಸಿ, ಘಟನಾ ಸ್ಥಳಕ್ಕೆ ಹೋಗಿ ಸೂಕ್ತ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಡಿವೈಎಸ್ಪಿ ವರದಿ ಕೊಟ್ಟಿದ್ದಾರೆ. ಅದನ್ನು ಆಧರಿಸಿ ರಾಚಯ್ಯ ಮಠಪತಿ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಎಸ್ಪಿ ಚನ್ನಬಸವಣ್ಣ ಎಸ್.ಎಲ್. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಆ. 17ರಂದು ಬಾಲಕಿ ಸಾವನ್ನಪ್ಪಿದ್ದಳು. ಯುವಕನೊಬ್ಬನ ಕಿರುಕುಳಕ್ಕೆ ಮಗಳು ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು. ಅ. 4ರಂದು ಹೂತಿದ್ದ ಬಾಲಕಿಯ ಶವ ತೆಗೆದು ಮರು ಪರೀಕ್ಷೆ ನಡೆಸಲಾಗಿದೆ. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.