ಹುಮನಾಬಾದ್: ಗ್ರಾಮೀಣರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಲವು ತಿಂಗಳ ಕಳೆದರೂ ದುರಸ್ತಿಯಾಗಿಲ್ಲ.

ಗ್ರಾಮದ ಬಸವೇಶ್ವರ ವೃತ್ತದ ಮುಖ್ಯ ರಸ್ಥೆಯ ಪಕ್ಕದಲ್ಲಿನ ನೀರಿನ ಘಟಕ ದುರಸ್ತಿಗೆ ಬಂದು ಹಲವು ತಿಂಗಳಾಗಿವೆ. ಸಂಬಂಧಪಟ್ಟ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಸ್ಥಳೀಯರಿಗೆ ಇದರ ಉಪಯೋಗವೂ ಆಗುತ್ತಿಲ್ಲ ಎಂಬುದು ನಿವಾಸಿಗರ ದೂರು.

ಸುಮಾರು 12 ಸಾವಿರ ಜನ ಸಂಖ್ಯೆ ಹೊಂದಿದೆ. ಗ್ರಾಮ ಪಂಚಾಯಿತಿ ಕಚೇರಿ ಆವರಣ ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಯಲ್ಲಿದೆ. ಆದರೆ ಗ್ರಾಮದ ವಾರ್ಡ್ ನಂ.7ರ ವ್ಯಾಪ್ತಿಯ ಬಸವೇಶ್ವರ ವೃತ್ತ ಬಳಿ ನೀರಿನ ಘಟಕ ಕೆಟ್ಟು ನಿಂತ್ತಿದೆ. ಸುಮಾರು 5 ವರ್ಷಗಳ ಹಿಂದೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್)ಇಲಾಖೆ ವತಿಯಿಂದ ನಿರ್ಮಾಣಗೊಂಡಿತ್ತು. ಆರಂಭದಲ್ಲಿ ನೀರು ಪಡೆಯುತ್ತಿದ್ದ ಸ್ಥಳೀಯರಿಗೆ, ಈಗ ಇದ್ದು ಇಲ್ಲದಂತೆ ಆಗಿದೆ.

ಶುದ್ದ ನೀರಿನ ಘಟಕದ ಬಗ್ಗೆ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೆ ಕ್ರಮ ತೆಗೆದು ಕೊಂಡಿಲ್ಲ ಎಂಬುದು ಸ್ಥಳೀಯರ ಆರೋಪ.

ಶುದ್ಧ ಕುಡಿಯುವ ನೀರು ಮಾತ್ರವಲ್ಲದೇ ಕೆಲವು ವಾರ್ಡ್‌ಗಳಲ್ಲಿ ಸಿಸಿ ರಸ್ತೆಗಳು ಕೆಟ್ಟು ಹೋಗಿವೆ. ಇದರಿಂದ ನಿವಾಸಿಗರು ಓಡಾಟಕ್ಕೆ ಅಡೆಚಣೆ ಆಗುತ್ತಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ, ರಸ್ತೆಯ ಮಧ್ಯೆ ಹಾಗೂ ತಗ್ಗು ಪ್ರದೇಶಗಳಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಇದರಿಂದ ಸಾಂಕ್ರಮಿಕ ರೋಗಗಳ ಭಯ ಕಾಡುತ್ತಿದೆ ಎನ್ನುತ್ತಾರೆ ಸ್ಥಳೀಯರು.

ಗ್ರಾಮದ ಕೆಲವು ವಾರ್ಡ್‌ಗಳಲ್ಲಿ ಈಗಾಗಲೇ ಚರಂಡಿ ಸ್ವಚ್ಛತೆ ಮಾಡಲಾಗಿದೆ. ವಾರ್ಡ್ ನಂ.5ರಲ್ಲಿಯೂ ಸ್ವಚ್ಛತೆ ಕಾರ್ಯ ಮಾಡಲಾಗುವುದು. ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಪಿಡಿಒ ಮಹಾದೇವ ದೇಶಪಾಂಡೆ ‘ಪ್ರಜಾವಾಣಿ’ಗೆ ತಿಳಿಸಿದರು.

ಕೆಟ್ಟು ನಿಂತಿರುವ ಘಟಕ ದುರಸ್ತಿಗೊಳಿಸಿ ಗ್ರಾಮಸ್ಥರಿಗೆ ಶುದ್ಧ ನೀರು ಒದಗಿಸುವುದರ ಜತಗೆ ಜನರ ಆರೋಗ್ಯ ರಕ್ಷಣೆಗೆ ಅಧಿಕಾರಿಗಳು ಮುಂದಾಬೇಕು

- ಬಸವರಾಜ ಅಷ್ಟಗಿ, ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.