ಬೀದರ್: ಜಿಲ್ಲೆಗೊಬ್ಬರು ಕುರುಬ ಸಮುದಾಯದ ಪ್ರತಿನಿಧಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎಂದು ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಸಮುದಾಯಕ್ಕೆ ಕನಿಷ್ಠ 25 ಟಿಕೆಟ್ ನೀಡಬೇಕು. ಜಿಲ್ಲೆಗೊಂದು ಟಿಕೆಟ್ ಕೊಟ್ಟರೆ, ಆಯಾ ಜಿಲ್ಲೆಗಳ ಇತರ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೂ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಇತರ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.