ಬೀದರ್: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಞಾನು ರಾಮಚಂದ್ರ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ವಸತಿ ಯೋಜನೆಗಳ ಜಿಪಿಎಸ್ ಮಾಡಿಲ್ಲ. ಬಿಆರ್‌ಜಿಎಫ್ ಅಡಿಯಲ್ಲಿ ವಿತರಿಸಲಾದ ಮೊಬೈಲ್ ಫೋನ್ ಕಳೆದರೂ ಮಾಹಿತಿ ನೀಡಿಲ್ಲ. ಗ್ರಾಮ ಪಂಚಾಯಿತಿ ಸಭೆಗಳನ್ನು ನಿಯಮಿತವಾಗಿ ಕರೆದಿಲ್ಲ. ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಇದ್ದರೂ ಏಜೆನ್ಸಿಯ ಮೂಲಕ ಕೆಲಸ ಮಾಡಿಸಿ ಪಂಚಾಯಿತಿಯಿಂದ ವೆಚ್ಚ ಭರಿಸಿದ್ದಾರೆ ಎನ್ನುವ ಆರೋಪಗಳು ಅವರ ಮೇಲೆ ಇವೆ. ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಜ್ಞಾನು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.