ಬೀದರ್: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿದರು. ಬಳಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ನಂಜುಂಡಪ್ಪ ವರದಿಯ ಶಿಫಾರಸಿನಂತೆ ರಾಯಚೂರಿಗೆ ಸಿಗಬೇಕಿದ್ದ ಐಐಟಿ ಧಾರವಾಡಕ್ಕೆ ಹೋಗಿದೆ. ಈ ಭಾಗಕ್ಕೆ ದೊಡ್ಡ ಅನ್ಯಾಯವಾಗಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಎರಡು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಅದಕ್ಕೆ ಸ್ಪಂದಿಸಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪ್ರಸ್ತಾವ ಕಳಿಸಬೇಕು ಎಂದು ಒತ್ತಾಯಿಸಿದರು.

ಕಾರಂಜಾ ಜಲಾಶಯ ಯೋಜನೆಯಲ್ಲಿ ಜಮೀನು ಕಳೆದುಕೊಂಡ ಸಂತ್ರಸ್ತರು 745 ದಿನಗಳಿಂದ ಹೋರಾಟ ನಡೆಸುತ್ತಿದ್ದು, ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು. ಈ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಜಿಲ್ಲೆಯ ರೈತರ ನಿಯೋಗದೊಂದಿಗೆ ಚರ್ಚಿಸಿ, ಪರಿಹಾರದ ಭರವಸೆ ಕೊಟ್ಟಿದ್ದರು. ಆದರೆ, ಅದು ಇದುವರೆಗೆ ಈಡೇರಿಲ್ಲ ಎಂದರು.

ಜಿಲ್ಲೆಯಿಂದ ಹೈದರಾಬಾದ್, ಪುಣೆ, ಮುಂಬೈ, ಬೆಂಗಳೂರು ಸೇರಿದಂತೆ ಇತರೆ ಮಹಾನಗರಗಳಿಗೆ ಯುವಕರು ದೊಡ್ಡ ಸಂಖ್ಯೆಯಲ್ಲಿ ವಲಸೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಅದನ್ನು ತಡೆಯಬಹುದು. ನಂಜುಂಡಪ್ಪ ವರದಿ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಐಐಟಿ ಸ್ಥಾಪಿಸಬೇಕು. ಅದನ್ನು ಬೀದರ್ ಜಿಲ್ಲೆಯಲ್ಲಿ ಮಾಡಿದರೆ ಸೂಕ್ತ. ಹೈದರಾಬಾದ್ ಸಮೀಪದಲ್ಲಿದ್ದು, ಅಲ್ಲಿ ಐಐಟಿ ಇದೆ ಎಂದು ಜಿಲ್ಲೆಯನ್ನು ನಿರ್ಲಕ್ಷಿಸುವಂತಿಲ್ಲ ಎಂದು ಮನವಿಯಲ್ಲಿ ವಿವರಿಸಿದರು.

ಬೀದರ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಬೇಗ ಪೂರ್ಣಗೊಳಿಸಿ, ಕನಿಷ್ಠ ಆರು ಲೇನ್ಗಳನ್ನು ನಿರ್ಮಿಸಬೇಕು. ಮುಂಬೈ, ನವದೆಹಲಿ ಹಾಗೂ ಉತ್ತರ ಭಾರತದ ಸ್ಥಳಗಳಿಗೆ ಹೊಸ ರೈಲುಗಳು ಮಂಜೂರು ಮಾಡಬೇಕು. ಬೀದರ್ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.

ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಪ್ರಮುಖರಾದ ರೋಶನ್, ವಿನಯ್ ಮಾಳಗೆ, ಬಸವರಾಜ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.