ಬೀದರ್: ‘ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ರಾಜ್ಯಕ್ಕೆ ಪರಿಹಾರ ನೀಡುವಂತೆ 25 ಬಿಜೆಪಿ ಸಂಸದರು ಕೇಳಲೇ ಇಲ್ಲ. ಇವರೆಲ್ಲ ಎಲ್ಲಿಗೆ ಹೋದರು? ರೈತರ ನೆರವಿಗೆ ಬಾರದ ಕೇಂದ್ರ ಸಚಿವ ಭಗವಂತ ಖೂಬಾ ಎಲ್ಲಿ ಹೋದರು? ಹೀಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿದ್ದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ.

ಖಾಲಿ ಚೊಂಬು ಹಿಡಿದುಕೊಂಡು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಬರಗಾಲದಿಂದ ರಾಜ್ಯದಲ್ಲಿ ನೀರಿನ ಸಮಸ್ಯೆ ವಿಪರೀತ ಇದೆ. ಆದರೆ, ಮೇಕೆದಾಟು ಯೋಜನೆ ಇರಲಿ, ಮಹಾದಾಯಿ ಯೋಜನೆ ಇರಲಿ ಅಥವಾ ಭದ್ರಾ ಮೇಲ್ದಂಡೆ ಯೋಜನೆಯೇ ಇರಲಿ ಇದ್ಯಾವುದಕ್ಕೂ ಕೇಂದ್ರ ಸರ್ಕಾರ ಹಣವನ್ನೇ ಬಿಡುಗಡೆ ಮಾಡಿಲ್ಲ. ಕರ್ನಾಟಕದ ರೈತರ ಹಿತ ಕಾಯುವ ಬದಲು ಅವರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಬರ ಪರಿಹಾರದ ವಿಷಯದಲ್ಲಿ ಕೇಂದ್ರ ಸರ್ಕಾರ ಘೋರ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಕೇಂದ್ರ ಸರ್ಕಾರ ₹3,400 ಕೋಟಿ ಪರಿಹಾರ ನೀಡಿದೆ. ರಾಜ್ಯ ಸರ್ಕಾರ ಏನು ನೀಡಿದೆ ಎಂದು ಕೇಳಿದ್ದಾರೆ. ಆದರೆ, ಅಶೋಕ ಅವರಿಗೆ ಅರಿವಿಲ್ಲ ಅಥವಾ ಅವರಿಗೆ ತಿಳಿವಳಿಕೆ ಇಲ್ಲ. ರಾಜ್ಯ ಸರ್ಕಾರ ಬರವನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದರು.

ಬರ ಪರಿಹಾರದ ವಿಷಯದಲ್ಲಿ ಬೀದರ್ ಹಾಗೂ ಕಲಬುರಗಿಯ ಸಂಸದರು ಚಕಾರ ಎತ್ತಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿ, ಯುವ ನಾಯಕ ಸಾಗರ್ ಖಂಡ್ರೆ ಅವರನ್ನು ನೀವು ಗೆಲ್ಲಿಸಿದರೆ, ಅವರು ಸಂಸತ್ತಿನಲ್ಲಿ ಬೀದರ್ ಮತ್ತು ರಾಜ್ಯದ ಧ್ವನಿಯಾಗುತ್ತಾರೆ ಎಂದು ಸುರ್ಜೇವಾಲಾ ಭರವಸೆ ನೀಡಿದರು.

ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಭೀಮರಾವ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ, ಮುಖಂಡರಾದ ರಾಜಶೇಖರ ಪಾಟೀಲ ಹುಮನಾಬಾದ್, ಅಶೋಕ ಖೇಣಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.