ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಕಲ್ಲೂರ್ ರಸ್ತೆಯಲ್ಲಿರುವ ಬಸವತೀರ್ಥ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಬೆಳಗ್ಗೆ ಘಟನೆ ನಡೆದಿದೆ. ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ಮುಂಜಾನೆ ಮಕ್ಕಳಿಗೆ ಉಣಬಡಿಸಿದ ನಂತರ ಮಕ್ಕಳು ಅಸ್ವಸ್ಥರಾಗಿದ್ದಾರೆ. ವಾಂತಿ, ಸುಸ್ತು, ತಲೆ ಸುತ್ತಿನಿಂದ ಬಳಲಿದ ವಿದ್ಯಾರ್ಥಿಗಳನ್ನು ತಕ್ಷಣವೇ ಹುಮನಾಬಾದ್ ತಾಲ್ಲೂಕು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ಭೇಟಿ ನೀಡಿ ಮಕ್ಕಳ ಅರೋಗ್ಯ ವಿಚಾರಿಸಿದ್ದಾರೆ. ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.