ಬೀದರ್: ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ವಿಶೇಷ ಯೋಜನೆಗಳ ಪ್ರಗತಿಯಲ್ಲಿ ಶೇಕಡ 80ಕ್ಕಿಂತ ಕಡಿಮೆ ಸಾಧನೆ ತೋರಿದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿ ಮಾಡಲು ಸೂಚನೆ ನೀಡಿದರು. ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು‘ ಎಂದು ತಿಳಿಸಿದರು.

‘ಪ್ರತಿ ತಿಂಗಳು 15ನೇ ತಾರೀಖಿನಂದು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಸಭೆ ನಡೆಯುತ್ತದೆ. ಒಂದು ವೇಳೆ ಆ ದಿನ ರಜೆ ಇದ್ದರೆ ಮರುದಿವಸ ಸಭೆ ನಡೆಯುತ್ತದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು’ ಎಂದು ಹೇಳಿದರು.

‘ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಗಳಲ್ಲಿ ಶೇ.80ರಷ್ಟು ಸಾಧಿಸಿರುವವರು ಶೇ. 90ರಷ್ಟು ಪ್ರಗತಿ ಸಾಧಿಸಬೇಕು’ ಎಂದು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೇಶ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.