ಬೀದರ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದಲೇ ಕಾಂಗ್ರೆಸ್ ಸರ್ವ ನಾಶ ಆಗಲಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೊಟ್ಟಿರುವ ಹೇಳಿಕೆ ಅರ್ಥಹೀನವಾದುದು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಹೇಳಿದ್ದಾರೆ.

ಖರ್ಗೆ ಅವರ ಸಾರಥ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆ ಆಗುತ್ತಿದೆ. ಇದರಿಂದ ಹತಾಶೆಗೊಂಡು ಚೌಹಾಣ್ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿರುಗೇಟು ನೀಡಿದ್ದಾರೆ.

ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷವು ಕರ್ನಾಟಕ, ತೆಲಂಗಾಣದ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ಅನೇಕ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ದೇಶದ ಎಲ್ಲ ರಾಜ್ಯಗಳಲ್ಲಿ ಬೇರು ಮಟ್ಟದಿಂದ ಬಲಗೊಂಡಿದೆ. ಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಬದಲಾವಣೆ ಆಗಲಿರುವ ಕಾರಣ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಹೇಳಿದ್ದಾರೆ.

ಶಿವರಾಜ್ ಸಿಂಗ್ ಚೌವಾಣ್ ಅವರು ಬೇರೆಯವರ ಬಗ್ಗೆ ಮಾತನಾಡುವ ಮೊದಲು ತಾವು ನುಡಿದಂತೆ ನಡೆದುಕೊಳ್ಳಬೇಕಿತ್ತು. ಮಧ್ಯಪ್ರದೇಶದಲ್ಲಿ ಚುನಾವಣೆಗೆ ಮುನ್ನ ₹450ಕ್ಕೆ ಸಿಲಿಂಡರ್ ಕೊಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಈಗ ₹1,100ಕ್ಕೆ ಕೊಡಲಾಗುತ್ತಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಅಧಿಕ ಸ್ಥಾನಗಳು ಲಭಿಸಲಿವೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.