ಬೀದರ್: ಸಾರ್ವಜನಿಕರ ಭೇಟಿಗೆ ಸರ್ಕಾರದ ನಿರ್ದೇಶನವಿದ್ದರೂ ಜನರಿಗೆ ಕಾಲಾವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿರುದ್ಧ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಎಲ್ಲ ಅಧಿಕಾರಿಗಳು ಪ್ರತಿದಿನ ಮಧ್ಯಾಹ್ನ 3.30ರಿಂದ ಸಂಜೆ 5.30ರ ವರೆಗೆ ಯಾವುದೇ ಸಭೆಗಳನ್ನು ನಿಗದಿಪಡಿಸದೆ, ಸಾರ್ವಜನಿಕರ ಭೇಟಿಗೆ ಸಮಯ ಕೊಟ್ಟು ಅವರ ಕುಂದು ಕೊರತೆ ಆಲಿಸಿ, ಜನಸ್ಪಂದನ ತಂತ್ರಾಂಶದಲ್ಲಿ ದಾಖಲಿಸಿ, ನಿವಾರಿಸಲು ಕ್ರಮ ಕೈಗೊಳ್ಳಬೇಕೆಂಬುದು ಸರ್ಕಾರದ ಸುತ್ತೋಲೆಯಲ್ಲಿದೆ. ಆದರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಈ ರೀತಿ ಮಾಡುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ನಡೆ. ಮಾನವ ಹಕ್ಕುಗಳ ಉಲ್ಲಂಘನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.