ಬೀದರ್: ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ) ಅನುಷ್ಠಾನಗೊಂಡು ಹತ್ತು ವರ್ಷ ಪೂರೈಸಿದ್ದು, ಇದರ ರೂವಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾರಂಭ ಫೆ. 20ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜನ, ಸಂಘ ಸಂಸ್ಥೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸೋಮವಾರ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಖರ್ಗೆ ಅವರ ವಿಶೇಷ ಶ್ರಮದಿಂದ 371(ಜೆ) ಅನುಷ್ಠಾನಗೊಂಡಿದ್ದು, ಇದರ ಪರಿಣಾಮ ಕಲ್ಯಾಣ ಕರ್ನಾಟಕ ಭಾಗದ ಸಾವಿರಾರು ಯುವಜನರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಲಭ್ಯವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಲಾಗಿದೆ. ವಾರ್ಷಿಕ ಮಂಡಳಿಗೆ ₹3 ಸಾವಿರ ಕೋಟಿಗೂ ಅಧಿಕ ಅನುದಾನ ಲಭ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ಯು.ಪಿ.ಎ. ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರ ಬಳಿಗೆ ಹಲವು ಬಾರಿ ನಿಯೋಗ ತೆಗೆದುಕೊಂಡು ಹೋಗಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 371(ಜೆ) ತಿದ್ದುಪಡಿಗೆ ಮಲ್ಲಿಕಾರ್ಜುನ ಖರ್ಗೆ ಅವಿರತ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.