ಬೀದರ್: ವಿಶೇಷ ಚೇತನರ ಕಲ್ಯಾಣಕ್ಕೆ ಶ್ರಮಿಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬಸವಪ್ರಕಾಶ ಕಲ್ಚರಲ್ ಮತ್ತು ವೆಲ್‍ಫೇರ್ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ವಿಶೇಷ ಚೇತನ ಸಾಧಕರಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ವಿಶೇಷ ಚೇತನರು ಯಾವುದೇ ರೀತಿಯ ಕೀಳರಿಮೆ ಹೊಂದಿರಬಾರದು. ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಂಸ್ಥೆಯ ಪ್ರಮುಖರಾದ ದಿಲೀಪ್ ಕಾಡವಾದ್, ಎಸ್.ಬಿ. ಕುಚಬಾಳ್, ಮಲ್ಲಿಕಾರ್ಜುನ ಲದ್ದೇಕರ್, ಮಹೇಶಕುಮಾರ ಕುಂಬಾರ್, ರಾಜೋದ್ದಿನ್, ಆರ್.ಎಂ. ಯತ್ನಾಳ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.