ಬೀದರ್: ಕಾಡು ಹಂದಿ ದಾಳಿಯಿಂದ ಗುರುವಾರ ಮೃತಪಟ್ಟಿದ್ದ ತಾಲ್ಲೂಕಿನ ಹೊಕ್ರಾಣ (ಕೆ) ಗ್ರಾಮದ ಕವಿತಾ ಅವರ ಮನೆಗೆ ಪರಿಸರ, ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆಯವರು ಶುಕ್ರವಾರ ಭೇಟಿ ನೀಡಿ ಅವರ ಕುಟುಂಬದವರಿಗೆ ₹15 ಲಕ್ಷ ಪರಿಹಾರದ ಚೆಕ್ ವಿತರಿಸಿದರು.

‘ಕವಿತಾ ಅವರು ಗುರುವಾರ ಜೋಳದ ಕಟಾವಿಗೆ ಹೋದಾಗ ಹೊಲದಲ್ಲಿ ಕಾಡು ಹಂದಿ ದಾಳಿಯಿಂದ ಮೃತಪಟ್ಟಿರುವುದು ವಿಷಾದನೀಯ ಸಂಗತಿ. ಅವರ ಕುಟುಂಬಕ್ಕೆ 24 ತಾಸಿನಲ್ಲಿ ಸರ್ಕಾರದ ನಿಯಮದ ಪ್ರಕಾರ ₹15 ಲಕ್ಷ ಪರಿಹಾರ ನೀಡಲಾಗಿದೆ ಎಂದು ಸಚಿವ ಖಂಡ್ರೆ ಪತ್ರಕರ್ತರಿಗೆ ತಿಳಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಭಗವಂತ ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ಈ ಘಟನೆ ಆದ ತಕ್ಷಣ ಅರಣ್ಯ ಇಲಾಖೆಯ ಆಧಿಕಾರಿಗಳಿಗೆ ಸೂಚನೆ ನೀಡಿದ್ದೆ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಮೃತ ಕುಟುಂಬದ ಸದಸ್ಯರಿಗೆ 24 ತಾಸಿನಲ್ಲಿ ಪರಿಹಾರ ನೀಡುವ ಕೆಲಸ ಮಾಡಲಾಗಿದೆ ಎಂದರು.

ಈ ಕುಟುಂಬಕ್ಕೆ ಪರಿಹಾರದ ಹೊರತಾಗಿ 5 ವರ್ಷಗಳ ವರೆಗೆ ₹4 ಸಾವಿರ ಪೆನ್ಶನ್ ನೀಡಲಾಗುತ್ತದೆ. ನಮ್ಮ ಜಿಲ್ಲೆಯಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ. ಅವುಗಳ ನಿಯಂತ್ರಣಕ್ಕಾಗಿ ಕ್ರಮ ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಕಲಬುರಗಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಪನ್ವರ್, ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಕುಮಾರ, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಾಂತಕುಮಾರ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಹೇಂದ್ರ ಮೌರ್ಯ ಹಾಜರಿದ್ದರು.

ಕವಿತಾ ಅವರು ಇತರೆ ನಾಲ್ವರು ಮಹಿಳೆಯರೊಂದಿಗೆ ಗುರುವಾರ ಗ್ರಾಮದ ಹೊಲಕ್ಕೆ ಜೋಳ ಕಟಾವಿಗೆ ಹೋಗಿದ್ದರು. ಈ ವೇಳೆ ಕಾಡು ಹಂದಿ ನಡೆಸಿದ ದಾಳಿಯಿಂದ ಗಂಭೀರ ಗಾಯಗೊಂಡಿದ್ದರು. ನಂತರ ಬೀದರ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.