ಬೀದರ್: ಶಾಹೀನ್ ಶಿಕ್ಷಣ ಸಂಸ್ಥೆಯ ವಿರುದ್ಧ ದಾಖಲಿಸಿರುವ ದೇಶದ್ರೋಹದ ಪ್ರಕರಣ ಹಿಂದಕ್ಕೆ ಪಡೆಯಬೇಕು, ಬಂಧಿಸಲಾದ ಶಾಲೆಯ ಮುಖ್ಯಶಿಕ್ಷಕಿ ಹಾಗೂ ಬಾಲಕಿಯ ತಾಯಿಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಇಲ್ಲಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಶಾಹೀನ್ ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳು ನಾಟಕ ಪ್ರದರ್ಶನ ಮಾಡುವ ವೇಳೆ ಪ್ರಧಾನಿ ಅವಹೇಳನ ಮಾಡಿದ್ದು ದೇಶದ್ರೋಹದ ಕೆಲಸವಾದರೆ, ಸಂಸದ ಅನಂತ್ಕುಮಾರ್ ಹೆಗ್ಡೆ ಗಾಂಧಿಜಿ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು ದೇಶದ್ರೋಹವಲ್ಲವೇ?, ಅವರ ವಿರುದ್ಧ ಪೊಲೀಸರು ಏಕೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಿಲ್ಲ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಕೂಡಲೇ ಶಾಹೀನ್ ಶಿಕ್ಷಣ ಸಂಸ್ಥೆ ಮೇಲಿನ ಪ್ರಕರಣ ಕೈ ಬಿಟ್ಟು, ಬಂಧಿಸಿದವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ, ಕಾರ್ಯದರ್ಶಿ ವೆನಿಲಾ ಸೂರ್ಯವಂಶಿ, ಜಿಲ್ಲಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ವಿದ್ಯಾ ತೂಗಾವೆ, ಲತಾ ರಾಠೋಡ್ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.