ಬೀದರ್: ‘ಪಕ್ಷ ಟಿಕೆಟ್ ಕೊಡುವ ಅಭ್ಯರ್ಥಿ ಪರವಾಗಿ ಪ್ರತಿಯೊಬ್ಬ ಕಾರ್ಯಕರ್ತ ಕೆಲಸ ಮಾಡಬೇಕು. ನಕಾರ ನಿಲುವು ತಳೆದಿದ್ದರೆ ಬೇರೆ ದಾರಿ ನೋಡಿಕೊಳ್ಳಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದರು.

ಇಲ್ಲಿಯ ನೌಬಾದ್ನಲ್ಲಿರುವ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಅವರು ಪಕ್ಷದ ವಿವಿಧ ಘಟಕಗಳ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು.

‘ಇಂತವರಿಗೆ ಟಿಕೆಟ್ ಕೊಟ್ಟರೆ ನೀವು ಪ್ರಚಾರ ಕೈಗೊಳ್ಳುವುದಿಲ್ಲ ಎಂದು ಹೇಳುವವರು ಇಂದಿನ ಸಭೆಗೂ ಕುಳಿತುಕೊಳ್ಳುವ ಅಗತ್ಯವಿಲ್ಲ’ ಎಂದು ಭಿನ್ನಮತೀಯರಿಗೆ ಸಭೆಯಲ್ಲಿ ಬಿಸಿ ಮುಟ್ಟಿಸಿದರು.

‘ಪದಾಧಿಕಾರಿಗಳು ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸ ಬೇಕು. ಬಿಜೆಪಿ ಸರ್ಕಾರದ ಸಾಧನೆ ಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು’ ಎಂದು ಸೂಚಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಕಲಬುರಗಿ ವಿಭಾಗದ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಶಾಸಕ ಶರಣು ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಮಾಜಿ ಶಾಸಕ ಮಾಲಿಕಯ್ಯ ಗುತ್ತೆದಾರ,ಪ್ರಕಾಶ ಖಂಡ್ರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.