ಹನೂರು (ಚಾಮರಾಜನಗರ): ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ವಿವಾಹಿತನೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಪೈಶಾಚಿಕ ಕೃತ್ಯ ಎಸಗಿರುವ ಬಸವರಾಜು (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಯು ಸೋಮವಾರ ಬೆಳಿಗ್ಗೆ ಮನೆಯ ಬಳಿ ಆಟವಾಡುತ್ತಿದ್ದಾಗ, ಆರೋಪಿಯು ತಿಂಡಿ ಕೊಡಿಸುವುದಾಗಿ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆ ನಂತರ ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ಬಂದ ಬಾಲಕಿಯು ಜ್ವರ ಹಾಗೂ ಮೈಕೈ ನೋವು ಎಂದು ಮಲಗಿದ್ದಳು. ತಂದೆ ಬಂದು ವಿಚಾರಿಸಿದಾಗ ನಡೆದ ಘಟನೆಯನ್ನು ಬಾಲಕಿ ತಿಳಿಸಿದ್ದಾಳೆ ಎಂದು ಗೊತ್ತಾಗಿದೆ. ನಂತರ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಡಿವೈಎಸ್ಪಿ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಬಾಲಕಿಯನ್ನು ಭೇಟಿ ಮಾಡಿ ಕುಟುಂಬದವರಿಂದ ಮಾಹಿತಿ ಪಡೆದಿದ್ದಾರೆ. ಆರೋಗ್ಯ ತಪಾಸಣೆಗಾಗಿ ಬಾಲಕಿಯನ್ನು ವೈದ್ಯರ ಬಳಿಕ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.