ಚಾಮರಾಜನಗರ: ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದನ್ನು ಕಡಿತಗೊಳಿಸಿದ್ದಕ್ಕಾಗಿ ಲೈನ್‌ಮ್ಯಾನ್ ಆನಂದರಾಜು ಎಂಬುವರ ಮೇಲೆ ಗ್ರಾಮದ ಶಿವಣ್ಣ ಮತ್ತು ಪರಶಿವಮೂರ್ತಿ ಎಂಬುವರು ಹಲ್ಲೆ ನಡೆಸಿದ್ದಾರೆ.

ಸೋಮವಾರ ಸಂಜೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ಆನಂದರಾಜು ಅವರು ಪಟ್ಟಣದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶನಿವಾರ ಮಧ್ಯಾಹ್ನ ಆನಂದರಾಜು ಅವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಇದರಿಂದ ಕೋಪಗೊಂಡ ಶಿವಣ್ಣ ಮತ್ತು ಪರಶಿವಮೂರ್ತಿ ಅವರು ಆನಂದರಾಜು ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

‘ಇಬ್ಬರೂ ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ’ ಎಂದು ಆನಂದರಾಜು ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ‘ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಹಲ್ಲೆ), 339 (ಕರ್ತವ್ಯಕ್ಕೆ ಅಡ್ಡಿ) 504 (ಶಾಂತಿ ಕದಡುವುದು), 506 (ಜೀವ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಠಾಣೆಯ ಸಬ್ ಇನ್‌ಸ್ಪೆಕ್ಟರ್ ಆನಂದೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.