ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಳ್ಳೇಗಾಲ | ಗೋಮಾಂಸ ಮಾರಾಟ: ಮೂವರ ಬಂಧನ

Published 14 ಜುಲೈ 2024, 16:02 IST
Last Updated 14 ಜುಲೈ 2024, 16:02 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಇಲ್ಲಿನ ಆನಂದ ಜ್ಯೋತಿ ಕಾಲೊನಿ ಬಡಾವಣೆಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಮೂವರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯ ನಿವಾಸಿ ಸಂತೋಷ್, ರಸುಲ್ ಹಾಗೂ ಅಲ್ಲಾ ಬಶಕ್ ಬಂಧಿತ ಆರೋಪಿಗಳು.

ಆರೋಪಿಗಳು ಬಡಾವಣೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಮಹೇಶ್ ಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಗಳಿಂದ 40 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT