ಚಾಮರಾಜನಗರ: ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಸೋಮವಾರ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ಹಾಗೂ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಗೆ ಭೇಟಿ ನೀಡಿದರು.

ಬಂಡೀಪುರದಲ್ಲಿ ಮಂಗಳವಾರ (ಜ.3) ನಡೆಯಲಿರುವ ಹುಲಿ ಸಂರಕ್ಷಣಾ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಸೋಮವಾರ ಜಿಲ್ಲೆಗೆ ಬಂದಿರುವ ಅವರು, ಬಿಳಿಗಿರಿರಂಗನಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಅಲ್ಲಿಂದ ಕೆ.ಗುಡಿಯಲ್ಲಿರುವ ಜಂಗಲ್ ಲಾಡ್ಜಸ್ ಹಾಗೂ ರೆಸಾರ್ಟ್ಸ್‌ಗೆ ತೆರಳಿ ವಿಶ್ರಾಂತಿ ಪಡೆದು, ಮಧ್ಯಾಹ್ನದ ಭೋಜನವನ್ನೂ ಮಾಡಿದರು. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪ್ ಜೆ. ಕಾಂಟ್ರಾಕ್ಟರ್ ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಹುಲಿ ಯೋಜನೆ ಹಾಗೂ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಕೆ.ಗುಡಿ ವಲಯದ ಸಿಬ್ಬಂದಿಯವರೊಂದಿಗೆ ಬೆರೆತ ಅವರು, ಸಂಜೆಯ ವೇಳೆಗೆ ಬಂಡೀಪುರಕ್ಕೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.